Jasprit Bumrah: ಜಸ್ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ ಖಡಕ್ ಸೂಚನೆ..!
TV9 Web | Updated By: ಝಾಹಿರ್ ಯೂಸುಫ್
Updated on:
Feb 11, 2024 | 8:54 AM
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ ಮುಂದಿನ 2 ಪಂದ್ಯಗಳಲ್ಲಿ ಒಂದು ಮ್ಯಾಚ್ಗೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ.
1 / 7
ಇಂಗ್ಲೆಂಡ್ ವಿರುದ್ಧದ ಕೊನೆಯ 3 ಪಂದ್ಯಗಳಿಗೆ ಭಾರತ ತಂಡವನ್ನು (India Squad) ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 3ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಕಾರಣ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು.
2 / 7
ಆದರೀಗ ರಾಜ್ಕೋಟ್ನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ 4ನೇ ಪಂದ್ಯದ ವೇಳೆ ಅವರಿಗೆ ವಿಶ್ರಾಂತಿ ನೀಡುವಂತೆ ಬಿಸಿಸಿಐ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಸೂಚಿಸಿದೆ.
3 / 7
ಏಕೆಂದರೆ ಮೊಹಮ್ಮದ್ ಶಮಿಯ ಅಲಭ್ಯತೆಯ ನಡುವೆ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಬೌಲಿಂಗ್ ಲೈನಪ್ ಅನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಬುಮ್ರಾ ಹೆಚ್ಚಿನ ಓವರ್ಗಳನ್ನು ಎಸೆದಿದ್ದರು.
4 / 7
ಇದೀಗ ಅವರ ಮೇಲಿನ ಒತ್ತಡವನ್ನು ಕಡಿಮೆಗೊಳಿಸಲು ಬಿಸಿಸಿಐ 4ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲಿದೆ. ಒಂದು ವೇಳೆ ಟೀಮ್ ಇಂಡಿಯಾ 3ನೇ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಬುಮ್ರಾ ವಿಶ್ರಾಂತಿ ತೆಗೆದುಕೊಳ್ಳುವುದು ಖಚಿತ ಎಂದೇ ಹೇಳಬಹುದು.
5 / 7
ಆದರೆ ಒಂದು ವೇಳೆ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲುಂಡರೆ ನಾಲ್ಕನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಬಹುದು. ಬುಮ್ರಾ ಅವರನ್ನು ಹೊರತುಪಡಿಸಿ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಭಾರತದ ಯಾವುದೇ ವೇಗದ ಬೌಲರ್ ಯಶಸ್ವಿಯಾಗಿಲ್ಲ. ಹೀಗಾಗಿ 3ನೇ ಪಂದ್ಯದ ಫಲಿತಾಂಶದ ಮೇಲೆ ಬುಮ್ರಾ ಅವರ ವಿಶ್ರಾಂತಿ ನಿರ್ಧಾರವಾಗಲಿದೆ.
6 / 7
ಒಟ್ಟಿನಲ್ಲಿ ಸತತ ಪಂದ್ಯಗಳನ್ನಾಡುತ್ತಿರುವ ಬುಮ್ರಾ ಅವರು ಈ ಟೆಸ್ಟ್ ಸರಣಿಯ ಬೆನ್ನಲ್ಲೇ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಇದಾದ ಬಳಿಕ ಜೂನ್ 1 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ. ಅದಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ನೀಡುವುದು ಅಗತ್ಯ ಎಂಬುದು ಬಿಸಿಸಿಐಗೆ ಮನವರಿಕೆಯಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಕೊನೆಯ ಮೂರು ಪಂದ್ಯಗಳಿಂದ ಒಂದು ಮ್ಯಾಚ್ ವೇಳೆ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ.
7 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.