IND vs NZ: ಸೋಲು, ಸೋಲು, ಸೋಲು… ಗಂಭೀರ್ ಗುರು ಆದ್ಮೇಲೆ ಬದಲಾಯ್ತು ಟೀಂ ಇಂಡಿಯಾ ಹಣೆಬರಹ

Updated on: Oct 26, 2024 | 7:48 PM

Gautam Gambhir: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 2-0 ಅಂತರದಿಂದ ಸೋತಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ಹಿನ್ನಡೆ. ಗೌತಮ್ ಗಂಭೀರ್ ಅವರ ಕೋಚಿಂಗ್‌ನಲ್ಲಿ ಭಾರತ ತಂಡ ಹಲವು ಸೋಲುಗಳನ್ನು ಅನುಭವಿಸಿದೆ. ಅದರಲ್ಲೂ ಗಂಭೀರ್ ಜವಬ್ದಾರಿವಹಿಸಿಕೊಂಡ ಮೇಲೆ ಟೀಂ ಇಂಡಿಯಾ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಹಲವಾರು ನಾಚಿಕೆಗೇಡಿನ ದಾಖಲೆಗಳನ್ನು ಮಾಡಿದೆ.

1 / 10
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ. ವಾಸ್ತವವಾಗಿ ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆದ ಬಳಿಕ ಟೀಂ ಇಂಡಿಯಾ ಈ ರೀತಿಯ ಹಲವು ಅವಮಾನಕರ ಸೋಲುಗಳಿಗೆ ಕೊರಳೊಡ್ಡಿದೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ. ವಾಸ್ತವವಾಗಿ ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆದ ಬಳಿಕ ಟೀಂ ಇಂಡಿಯಾ ಈ ರೀತಿಯ ಹಲವು ಅವಮಾನಕರ ಸೋಲುಗಳಿಗೆ ಕೊರಳೊಡ್ಡಿದೆ.

2 / 10

ವಾಸ್ತವವಾಗಿ 2024 ರ ಟಿ20 ವಿಶ್ವಕಪ್​ ಗೆಲ್ಲುವುದರೊಂದಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಕೊನೆಗೊಂಡಿತ್ತು. ಆ ನಂತರ ಗೌತಮ್ ಗಂಭೀರ್ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಗೌತಮ್ ಗಂಭೀರ್ ಈ ಜವಬ್ದಾರಿ ಹೊತ್ತ ಅಲ್ಪಾವಧಿಯಲ್ಲಿ ಟೀಂ ಇಂಡಿಯಾ ಹಲವು ನಾಚಿಕೆಗೇಡಿನ ದಾಖಲೆಗಳನ್ನು ಮಾಡಿದೆ.

3 / 10

ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಶ್ರೀಲಂಕಾಕ್ಕೆ ಮೊದಲ ವಿದೇಶಿ ಪ್ರವಾಸ ಕೈಗೊಂಡರು. ಅವರ ಅಧಿಕಾರಾವಧಿಯಲ್ಲಿ ಟಿ20 ಸರಣಿಯಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಆ ನಂತರ ನಡೆದ ಏಕದಿನ ಸರಣಿಯಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧ ಭಾರತ ಮೊದಲ ಏಕದಿನ ಸರಣಿ ಸೋತ ಬೇಡದ ದಾಖಲೆ ಬರೆಯಿತು.

4 / 10

ಅಲ್ಲದೆ ಶ್ರೀಲಂಕಾ ವಿರುದ್ಧದ ಈ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ಆಲೌಟ್ ಆಗಿತ್ತು. ವಾಸ್ತವವಾಗಿ, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಟೀಂ ಇಂಡಿಯಾ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಆಲೌಟ್ ಆದ ಬೇಡದ ದಾಖಲೆ ಬರೆಯಿತು.

5 / 10

ಕಳೆದ 45 ವರ್ಷಗಳಲ್ಲಿ ಭಾರತ ತಂಡವು ಒಂದು ವರ್ಷದಲ್ಲಿ ಯಾವುದೇ ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದಿರುವುದು ಇದೇ ಮೊದಲು. ಟೀಂ ಇಂಡಿಯಾ ಈ ವರ್ಷ ಕೇವಲ 3 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 2 ಪಂದ್ಯಗಳಲ್ಲಿ ಸೋಲ ಕಂಡಿದ್ದರೆ, ಒಂದು ಪಂದ್ಯವನ್ನು ಟೈ ಮಾಡಿಕೊಂಡಿತ್ತು.

6 / 10

ಇದೀಗ ನ್ಯೂಜಿಲೆಂಡ್ ವಿರುದ್ಧವೂ ಟೀಂ ಇಂಡಿಯಾದ ಕಳಪೆ ಪ್ರದರ್ಶನ ಮುಂದುವರಿದಿದ್ದು, ಬೆಂಗಳೂರಿನಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಇದರೊಂದಿಗೆ ಟೀಂ ಇಂಡಿಯಾ 36 ವರ್ಷಗಳ ನಂತರ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಸೋತ ಬೇಡದ ದಾಖಲೆ ಬರೆಯಿತು. ಇದಕ್ಕೂ ಮುನ್ನ ನ್ಯೂಜಿಲೆಂಡ್ 1988ರಲ್ಲಿ ಭಾರತದಲ್ಲಿ ಟೆಸ್ಟ್ ಗೆದ್ದಿತ್ತು.

7 / 10

ಹಾಗೆಯೇ 19 ವರ್ಷಗಳ ಬಳಿಕ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿತ್ತು. ಇದಕ್ಕೂ ಮೊದಲು 2005ರಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಪಾಕಿಸ್ತಾನ ಸೋಲಿಸಿತ್ತು.

8 / 10

ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್​ಗಳಿಗೆ ಆಲೌಟ್ ಆಗಿತ್ತು. ತವರಿನಲ್ಲಿ ಟೀಂ ಇಂಡಿಯಾ 50 ರನ್‌ಗಳಿಗೆ ಆಲೌಟ್ ಆಗಿದ್ದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು.

9 / 10

ಇದೀಗ ನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್‌ನಲ್ಲೂ ಟೀಂ ಇಂಡಿಯಾ ಸೋಲು ಅನುಭವಿಸಿದ್ದು, ಇದರೊಂದಿಗೆ ಭಾರತ ತಂಡ ಈ ಸರಣಿಯನ್ನೂ ಕಳೆದುಕೊಂಡಿದೆ. 12 ವರ್ಷಗಳ ನಂತರ ಭಾರತವು ತವರಿನಲ್ಲಿ ಟೆಸ್ಟ್ ಸರಣಿಯನ್ನು ಸೋತ ದಾಖಲೆಗೆ ಕೊರಳೊಡ್ಡಿದೆ.

10 / 10

ಈ ಸರಣಿಗೂ ಮುನ್ನ ಟೀಂ ಇಂಡಿಯಾ ತವರಿನಲ್ಲಿ ಸತತ 18 ಟೆಸ್ಟ್ ಸರಣಿಗಳನ್ನು ಗೆದ್ದಿತ್ತು. ಆದರೆ ಈಗ ಈ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿದೆ. ಭಾರತ 4302 ದಿನಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ.

Loading...
Unable to load recommendations.
Follow Us