AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 1st Test: ಕುತೂಹಲ ಕೆರಳಿಸಿದ ದ್ವಿತೀಯ ದಿನದಾಟ: ರೋಹಿತ್ ಮೇಲೆ ಎಲ್ಲರ ಕಣ್ಣು: ದೊಡ್ಡ ಮೊತ್ತ ಪೇರಿಸುತ್ತ ಭಾರತ?

India vs Australia 1st Test: ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 24 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 77 ರನ್​ಗಳನ್ನು ಕಲೆಹಾಕಿದೆ. ಭಾರತ ಇನ್ನೂ 100 ರನ್​ಗಳ ಹಿನ್ನಡೆಯಲ್ಲಿದೆ. ಅರ್ಧಶತಕ ಸಿಡಿಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿರುವ ನಾಯಕ ರೋಹಿತ್ ಶರ್ಮಾ ಮೇಲೆ ಎಲ್ಲರ ಕಣ್ಣಿದೆ.

Vinay Bhat
|

Updated on:Feb 10, 2023 | 7:27 AM

Share
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶುರುವಾಗಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಕಾಂಗರೂ ಪಡೆಯನ್ನು ಭಾರತ 177 ರನ್​ಗೆ ಆಲೌಟ್ ಮಾಡಿದೆ.

1 / 10
ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 24 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 77 ರನ್​ಗಳನ್ನು ಕಲೆಹಾಕಿದೆ. ಭಾರತ ಇನ್ನೂ 100 ರನ್​ಗಳ ಹಿನ್ನಡೆಯಲ್ಲಿದೆ.

2 / 10
ಅರ್ಧಶತಕ ಸಿಡಿಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿರುವ ನಾಯಕ ರೋಹಿತ್ ಶರ್ಮಾ ಮೇಲೆ ಎಲ್ಲರ ಕಣ್ಣಿದೆ. ಹಿಟ್​ಮ್ಯಾನ್ ಬ್ಯಾಟ್​ನಿಂದ ಶತಕ ಬರುತ್ತಾ ಎಂಬುದು ನೋಡಬೇಕಿದೆ. ಜೊತೆಗೆ ದೊಡ್ಡ ಮೊತ್ತ ಪೇರಿಸುವ ಪ್ಲಾನ್​ನಲ್ಲಿ ಟೀಮ್ ಇಂಡಿಯಾವಿದೆ. ಹೀಗೆ ಅನೇಕ ಕಾರಣಗಳಿಗೆ ದ್ವಿತೀಯ ದಿನದಾಟ ಕುತೂಹಲ ಕೆರಳಿಸಿದೆ. ಅಲ್ಲದೆ ಎರಡನೇ ದಿನ ಪಿಚ್ ಹೇಗೆ ವರ್ತಿಸುತ್ತೆ ನೋಡಬೇಕಿದೆ.

3 / 10
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಎರಡು ರನ್​ಗೆ ಎರಡು ವಿಕೆಟ್ ಕಳೆದುಕೊಂಡಿತು. ಡೇವಿಡ್ ವಾರ್ನರ್​ರನ್ನು (1) ಶಮಿ ಪೆವಿಲಿಯನ್​ಗೆ ಅಟ್ಟಿದರೆ ಉಸ್ಮಾನ್ ಖ್ವಾಜಾ (1) ಅವರನ್ನು ಮೊಹಮ್ಮದ್ ಸಿರಾಜ್ ಔಟ್ ಮಾಡಿದರು.

4 / 10
ಈ ಸಂದರ್ಭ ಜೊತೆಯಾದ ಮಾರ್ನಸ್ ಲಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ತಂಡಕ್ಕೆ ಆಸರೆಯಾಗಿ ನಿಂತರು. ಎಚ್ಚರಿಕೆಯ ಆಟವಾಡಿದ ಈ ಜೋಡಿ 82 ರನ್​ಗಳ ಕಾಣಿಕೆ ನೀಡಿತು. ಇವರ ಜೊತೆಯಾಟಕ್ಕೆ ಬ್ರೇಕ್ ಹಾಕಿದ್ದು ರವೀಂದ್ರ ಜಡೇಜಾ.

5 / 10
ಕ್ರೀಸ್ ಕಚ್ಚಿ ಆಡುತ್ತಿದ್ದ ಲಾಬುಶೇನ್​ಗೆ ಜಡೇಜಾ ಕೆಡ್ಡಾ ತೋರಿದರು. 123 ಎಸತಗಳಲ್ಲಿ 49 ರನ್ ಗಳಿಸಿ ಮಾರ್ನಸ್ ಔಟಾದರೆ, ಅತ್ತ ಅಪಾಯಕಾರಿ ಗೋಚರಿಸಿದ ಸ್ಮಿತ್​ಗೂ (37) ಜಡೇಜಾ ಪೆವಿಲಿಯನ್ ಹಾದಿ ತೋರಿದರು.

6 / 10
ನಂತರ ಬಂದ ಬ್ಯಾಟರ್​ಗಳ ಪೈಕಿ ಹ್ಯಾಂಡ್ಸ್​ಕಾಂಬ್ 31 ಹಾಗೂ ಅಲೆಕ್ಸ್ ಕ್ಯಾರಿ 36 ರನ್ ಗಳಿಸಿದ್ದು ಬಿಟ್ಟರೆ ಉಳಿದವರ ಸ್ಕೋರ್ ಎರಡಂಕಿ ದಾಟಲಿಲ್ಲ. ಮೂವರು ಬ್ಯಾಟರ್​ಗಳು ಸೊನ್ನೆ ಸುತ್ತಿದರು. ಆಸ್ಟ್ರೇಲಿಯಾ 63.5 ಓವರ್​ಗಳಲ್ಲಿ 177 ರನ್​ಗೆ ಆಲೌಟ್ ಆಯಿತು.

7 / 10
ಭಾರತ ಪರ ಭರ್ಜರಿ ಕಮ್​ಬ್ಯಾಕ್ ಮಾಡಿದ ರವೀಂದ್ರ ಜಡೇಜಾ 22 ಓವರ್​​ಗೆ 47 ರನ್ ನೀಡಿ 5 ವಿಕೆಟ್ ಕಿತ್ತರೆ, ಆರ್. ಅಶ್ವಿನ್ 3, ಶಮಿ ಹಾಗೂ ಸಿರಾಜ್ ತಲಾ 1 ವಿಕೆಟ್ ಪಡೆದರು.

8 / 10
ನಂತರ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್ ಬಿರುಸಿನ ಬ್ಯಾಟಿಂಗ್ ನಡೆಸಿದರೆ ಕೆಎಲ್ ರಾಹುಲ್ ಉತ್ತಮ ಸಾಥ್ ನೀಡಿದರು. ಆದರೆ, ಇವರಿಬ್ಬರ ಜೊತೆಯಾಟ 76 ರನ್​ಗೆ ಅಂತ್ಯವಾಯಿತು. ರಾಹುಲ್ 71 ಎಸೆತಗಳಲ್ಲಿ 20 ರನ್​ಗೆ ಔಟಾದರು.

9 / 10
ಹೀಗೆ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ಕಳೆದುಕೊಂಡು 77 ರನ್ ಕಲೆಹಾಕಿದೆ. ರೋಹಿತ್ 69 ಎಸೆತಗಳಲ್ಲಿ 56 ರನ್ ಗಳಿಸಿ ಹಾಗೂ ರವಿಚಂದ್ರನ್ ಅಶ್ವಿನ್ 5 ಎಸೆತಗಳಲ್ಲಿ ಖಾತೆ ತೆರೆಯದೆ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

10 / 10

Published On - 7:27 am, Fri, 10 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ