Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

|

Updated on: Jul 08, 2024 | 8:59 AM

India vs Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 234 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡವು 18.4 ಓವರ್​ಗಳಲ್ಲಿ 134 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

1 / 5
IND vs ZIM: ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು.

2 / 5
ಮೊದಲ ಓವರ್​ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ರುತುರಾಜ್ ಗಾಯಕ್ವಾಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 11 ಓವರ್​ಗಳಾಗುವಷ್ಟರಲ್ಲಿ ಟೀಮ್ ಇಂಡಿಯಾ ಮೊತ್ತ 100ರ ಗಡಿದಾಟಿತು.

3 / 5
ಟೀಮ್ ಇಂಡಿಯಾ ಮೊತ್ತ ನೂರರ ಗಡಿದಾಟುತ್ತಿದ್ದಂತೆ ಅಬ್ಬರಿಸಲಾರಂಭಿಸಿದ ಅಭಿಷೇಕ್ ಶರ್ಮಾ 46 ಎಸೆತಗಳಲ್ಲಿ ಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಿಂಕು ಸಿಂಗ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 22 ಎಸೆತಗಳನ್ನು ಎದುರಿಸಿದ ರಿಂಕು 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 77 ರನ್ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 234 ರನ್​​ಗೆ ಬಂದು ನಿಂತಿತು.

4 / 5
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅಂತಿಮ 10 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007 ರಲ್ಲಿ ಕೀನ್ಯಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಕೊನೆಯ 10 ಓವರ್​ಗಳಲ್ಲಿ 159 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

5 / 5
ಇದೀಗ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಈ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಮೊದಲ 10 ಓವರ್​ಗಳಲ್ಲಿ 74 ರನ್ ಬಾರಿಸಿದ್ದ ಭಾರತೀಯ ಬ್ಯಾಟರ್​ಗಳು, ಕೊನೆಯ 10 ಓವರ್​ಗಳಲ್ಲಿ ಬರೋಬ್ಬರಿ 160 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಂತಿಮ ಹತ್ತು ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On - 8:58 am, Mon, 8 July 24