WTC 2025: ನ್ಯೂಝಿಲೆಂಡ್ಗೆ ಸೋಲು: ಅಗ್ರಸ್ಥಾನಕ್ಕೇರಿದ ಭಾರತ
Team India: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಈ ಹಿಂದೆ ಮೊದಲ ಸ್ಥಾನದಲ್ಲಿದ್ದ ನ್ಯೂಝಿಲೆಂಡ್ ತಂಡವು ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಇದರ ಬೆನ್ನಲ್ಲೇ 2ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಮೊದಲ ಸ್ಥಾನಕ್ಕೇರಿದೆ. ಇನ್ನು ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ.