WTC 2025: ನ್ಯೂಝಿಲೆಂಡ್​ಗೆ ಸೋಲು: ಅಗ್ರಸ್ಥಾನಕ್ಕೇರಿದ ಭಾರತ

| Updated By: ಝಾಹಿರ್ ಯೂಸುಫ್

Updated on: Mar 03, 2024 | 11:14 AM

Team India: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಈ ಹಿಂದೆ ಮೊದಲ ಸ್ಥಾನದಲ್ಲಿದ್ದ ನ್ಯೂಝಿಲೆಂಡ್ ತಂಡವು ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಇದರ ಬೆನ್ನಲ್ಲೇ 2ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಮೊದಲ ಸ್ಥಾನಕ್ಕೇರಿದೆ. ಇನ್ನು ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ.

1 / 7
ವೆಲ್ಲಿಂಗ್ಟನ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ನ್ಯೂಝಿಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023-25 ರ ಅಂಕಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡಿದೆ.

2 / 7
ಇದರೊಂದಿಗೆ ಎರಡನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ. ಇನ್ನು ಮೂರನೇ ಸ್ಥಾನ ಅಲಂಕರಿಸುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನಗಳಲ್ಲಿದೆ ನೋಡೋಣ...

3 / 7
1- ಭಾರತ: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 5 ಗೆಲುವು, 2 ಸೋಲು ಹಾಗೂ 1 ಡ್ರಾನೊಂದಿಗೆ ಒಟ್ಟು 62 ಪಾಯಿಂಟ್ಸ್​ ಕಲೆಹಾಕಿದೆ. ಭಾರತ ತಂಡವು ಒಟ್ಟು 64.58% ಗೆಲುವಿನ ಶೇಕಡಾವಾರು ಹೊಂದಿದ್ದು, ಈ ಮೂಲಕ ಅಗ್ರಸ್ಥಾನ ಅಲಂಕರಿಸಿದೆ.

4 / 7
2- ನ್ಯೂಝಿಲೆಂಡ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 5 ಪಂದ್ಯಗಳನ್ನಾಡಿರುವ ನ್ಯೂಝಿಲೆಂಡ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ 60.00% ಗೆಲುವಿನ ಶೇಕಡಾವಾರು ಹೊಂದಿರುವ ಕಿವೀಸ್ ಪಡೆ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

5 / 7
3- ಆಸ್ಟ್ರೇಲಿಯಾ: WTC ನಲ್ಲಿ 11 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ 7 ಜಯ, 3 ಸೋಲು ಹಾಗೂ 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಸದ್ಯ 59.09% ಗೆಲುವಿನ ಶೇಕಡಾವಾರು ಹೊಂದಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶ್ರೇಯಾಂಕದಲ್ಲಿ 3ನೇ ಸ್ಥಾನದಲ್ಲಿದೆ.

6 / 7
4- ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 2 ಪಂದ್ಯಗಳನ್ನಾಡಿರುವ ಬಾಂಗ್ಲಾದೇಶ್ ತಂಡವು 1 ಪಂದ್ಯದಲ್ಲಿ ಗೆದ್ದರೆ, ಮತ್ತೊಂದು ಪಂದ್ಯದಲ್ಲಿ ಸೋತಿದೆ. ಈ ಮೂಲಕ 50.00% ಗೆಲುವಿನ ಶೇಕಡಾವಾರಿನೊಂದಿಗೆ 4ನೇ ಸ್ಥಾನದಲ್ಲಿದೆ.

7 / 7
5- ಪಾಕಿಸ್ತಾನ್: WTC ನಲ್ಲಿ ಪಾಕಿಸ್ತಾನ್ ತಂಡವು ಇದುವರೆಗೆ 5 ಪಂದ್ಯಗಳನ್ನಾಡಿದೆ. ಈ ವೇಳೆ 2 ಗೆಲುವು ದಾಖಲಿಸಿದರೆ, 3 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ 36.66% ಗೆಲುವಿನ ಶೇಕಡಾವಾರು ಹೊಂದಿರುವ ಪಾಕಿಸ್ತಾನ್ 5ನೇ ಸ್ಥಾನದಲ್ಲಿದೆ.