AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಶ್ರೇಯಸ್ ಫಿಟ್ ಆಗದಿದ್ದರೆ ಯಾರಿಗೆ ಸಿಗಲಿದೆ ಟೀಂ ಇಂಡಿಯಾದಲ್ಲಿ ಅವಕಾಶ?

Shreyas Iyer fitness: ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಶುಭ್​ಮನ್ ಗಿಲ್ ನಾಯಕತ್ವ ವಹಿಸಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಮರಳಿದ್ದಾರೆ. ಆದರೆ ಅಯ್ಯರ್ ಫಿಟ್ನೆಸ್ ಸಾಬೀತುಪಡಿಸಬೇಕಿದೆ. ರುತುರಾಜ್ ಗಾಯಕ್ವಾಡ್ ಅವರನ್ನು ಕೈಬಿಟ್ಟಿದ್ದಕ್ಕೆ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವಕಪ್ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪೃಥ್ವಿಶಂಕರ
|

Updated on: Jan 04, 2026 | 9:19 PM

Share
ಜನವರಿ 11 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್​ಮನ್ ಗಿಲ್ ನಾಯಕತ್ವವಹಿಸಿಕೊಂಡಿದ್ದರೆ, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ತಂಡಕ್ಕೆ ಮರಳಿದ್ದಾರೆ. ಇಂಜುರಿಯಿಂದಾಗಿ ಬಹಳ ದಿನಗಳವರೆಗೆ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಅಯ್ಯರ್, ಇದೀಗ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ.

1 / 5
ಆದಾಗ್ಯೂ ಶ್ರೇಯಸ್ ಅಯ್ಯರ್ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಹೀಗಾಗಿ ತಂಡವನ್ನು ಪ್ರಕಟಿಸುವಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಿಸಿಸಿಐ, ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸಬೇಕಾಗಿದೆ ಎಂದಿದೆ. ಹೀಗಾಗಿ ಅಯ್ಯರ್ ಜನವರಿ 6 ರಂದು ನಡೆಯಲಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಆಡಲಿದ್ದು, ಅಲ್ಲಿ ತಮ್ಮ ಫಿಟ್ನೆಸ್ ಸಾಭೀತುಪಡಿಸಲಿದ್ದಾರೆ.

2 / 5
ಆದಾಗ್ಯೂ ಒಂದು ವೇಳೆ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸದಿದ್ದರೆ, ಅವರ ಸ್ಥಾನದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಪ್ರಶ್ನೆಯಾಗಿದೆ. ಆ ಪ್ರಶ್ನೆಗೆ ಉತ್ತರ ಕೂಡ ಸಿದ್ಧವಿದ್ದು, ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಯ್ಯರ್ ಬದಲಿಯಾಗಿ ಆಡಿದ್ದ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಹೀಗಾಗಿ ಈ ಸರಣಿಯಲ್ಲೂ ಅಯ್ಯರ್ ಬದಲಿಗೆ ಅವರು ಆಡಬಹುದು.

3 / 5
ವಾಸ್ತವವಾಗಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ರುತುರಾಜ್ ಅವರನ್ನು ಕೈಬಿಟ್ಟಿರುವುದಕ್ಕೆ ಬಿಸಿಸಿಐ ವಿರುದ್ಧ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಪ್ರತಿಭಾವಂತ ಆಟಗಾರನನ್ನು ಆಯ್ಕೆ ಮಾಡದಿರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಆದರೆ ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ ಎಂಬುದರಲ್ಲಿ ಯಾವುದೇ ಅನುಮಾವಿಲ್ಲ.

4 / 5
ಏಕದಿನ ಸರಣಿಗೆ ಭಾರತ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

5 / 5
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ

ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!

ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ

ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ

‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ