India Odi Squad: ಟೀಮ್ ಇಂಡಿಯಾದಿಂದ ಮೂವರು ಔಟ್, ಐವರು ಇನ್..!
India Odi Squad: ಜನವರಿ ತಿಂಗಳಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಪಂದ್ಯಗಳನ್ನು ಆಡಿತ್ತು. ಈ ವೇಳೆ ತಂಡದಲ್ಲಿದ್ದ ಮೂವರು ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ಆ ಆಟಗಾರರು ಯಾರೆಂದರೆ...
1 / 12
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗಾಗಿ 18 ಸದಸ್ಯರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಆದರೆ ಈ ಹಿಂದೆ ತಂಡದಲ್ಲಿದ್ದ ಮೂವರು ಆಟಗಾರರು ಈ ಬಾರಿ ಆಯ್ಕೆಯಾಗಿಲ್ಲ. ಅಂದರೆ ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿದ್ದ ಮೂವರು ಆಟಗಾರರು ಈ ಬಾರಿ ಹೊರಬಿದ್ದಿದ್ದಾರೆ.
2 / 12
ಜನವರಿ ತಿಂಗಳಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಪಂದ್ಯಗಳನ್ನು ಆಡಿತ್ತು. ಈ ವೇಳೆ ತಂಡದಲ್ಲಿದ್ದ ಮೂವರು ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ಆ ಆಟಗಾರರು ಯಾರೆಂದರೆ...
3 / 12
ರಜತ್ ಪಾಟಿದಾರ್: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ರಜತ್ ಪಾಟಿದಾರ್ ಅವಕಾಶ ಪಡೆದಿದ್ದರು. ಆದರೆ ಅವರಿಗೆ ಕಣಕ್ಕಿಳಿಯಲು ಚಾನ್ಸ್ ಸಿಕ್ಕಿರಲಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಅವರನ್ನು ಕೈ ಬಿಡಲಾಗಿದೆ.
4 / 12
ಶಹಬಾಝ್ ಅಹ್ಮದ್: ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಲ್ರೌಂಡರ್ ಆಗಿ ಸ್ಥಾನ ಪಡೆದಿಲ್ಲ ಶಹಬಾಝ್ ಅಹ್ಮದ್ ಕೂಡ ಆಸೀಸ್ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ.
5 / 12
ಶ್ರೀಕರ್ ಭರತ್: ಕಿವೀಸ್ ವಿರುದ್ಧದ ಸರಣಿಯಲ್ಲಿ ಹೆಚ್ಚುವರಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಶ್ರೀಕರ್ ಭರತ್ ಆಯ್ಕೆಯಾಗಿದ್ದರು. ಆದರೆ ಅವರಿಗೆ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ದೊರೆತಿರಲಿಲ್ಲ.
6 / 12
ಇನ್ನು ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗಾಗಿ ಐವರು ಸ್ಟಾರ್ ಆಟಗಾರರು ತಂಡಕ್ಕೆ ಮರಳಿದ್ದಾರೆ. ಅವರೆಂದರೆ....
7 / 12
ರವೀಂದ್ರ ಜಡೇಜಾ: ಕಳೆದ 5 ತಿಂಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಏಕದಿನ ತಂಡಕ್ಕೆ ಮರಳಿದ್ದಾರೆ. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
8 / 12
ಕೆಎಲ್ ರಾಹುಲ್: ವಿವಾಹದ ನಿಮಿತ್ತ ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
9 / 12
ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಆಲ್ರೌಂಡರ್ ಅಕ್ಷರ್ ಪಟೇಲ್ ಕೂಡ ನ್ಯೂಜಿಲೆಂಡ್ ವಿರುದ್ದದ ಸರಣಿಯಲ್ಲಿ ಆಡಿರಲಿಲ್ಲ. ಇದೀಗ ಅಕ್ಷರ್ ಸಹ ತಂಡಕ್ಕೆ ಮರಳಿದ್ದಾರೆ.
10 / 12
ಶ್ರೇಯಸ್ ಅಯ್ಯರ್: ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
11 / 12
ಜಯದೇವ್ ಉನಾದ್ಕಟ್: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗದ ಜಯದೇವ್ ಉನಾದ್ಕಟ್ ಈ ಬಾರಿ ಎಡಗೈ ವೇಗಿಯಾಗಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
12 / 12
ಭಾರತ ಏಕದಿನ ತಂಡ: ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.
Published On - 8:30 pm, Mon, 20 February 23