IND vs WI: ಬರೋಬ್ಬರಿ 10 ವರ್ಷಗಳ ಬಳಿಕ ಏಕದಿನ ತಂಡದಲ್ಲಿ ಸ್ಥಾನ ಪಡೆದ ಎಡಗೈ ವೇಗಿ..!
Jaydev unadkat, IND vs WI: ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಏಕದಿನ ತಂಡಕ್ಕೆ ಜಯದೇವ್ ಉನದ್ಕಟ್ ಆಯ್ಕೆಯಾಗಿದ್ದಾರೆ. ಅವರಿಗೆ ಮತ್ತೊಮ್ಮೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿದ್ದು, 10 ವರ್ಷಗಳ ಕಾಯುವಿಕೆ ಕೊನೆಗೊಳ್ಳುತ್ತದೋ ಇಲ್ಲವೋ ಎಂಬುದು ಈಗ ಕುತೂಹಲ ಮೂಡಿಸಿದೆ.
1 / 7
ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಏಕದಿನ ತಂಡಕ್ಕೆ ಜಯದೇವ್ ಉನದ್ಕಟ್ ಆಯ್ಕೆಯಾಗಿದ್ದಾರೆ. ಅವರಿಗೆ ಮತ್ತೊಮ್ಮೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿದ್ದು, 10 ವರ್ಷಗಳ ಕಾಯುವಿಕೆ ಕೊನೆಗೊಳ್ಳುತ್ತದೋ ಇಲ್ಲವೋ ಎಂಬುದು ಈಗ ಕುತೂಹಲ ಮೂಡಿಸಿದೆ.
2 / 7
ಶುಕ್ರವಾರ ಬಿಸಿಸಿಐ, ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಅವರೊಂದಿಗೆ ಉನದ್ಕಟ್ ಅವರನ್ನೂ ಸಹ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇವರೊಂದಿಗೆ ಮುಖೇಶ್ ಕುಮಾರ್ ಅವರಿಗೂ ಅವಕಾಶ ನೀಡಲಾಗಿದೆ.
3 / 7
ಕಳೆದ 10 ವರ್ಷಗಳಲ್ಲಿ ಮತ್ತೆ ನೀಲಿ ಜೆರ್ಸಿ ಧರಿಸಿ ಮೈದಾನಕ್ಕಿಳಿಯುವ ಕನಸು ಕಾಣುತ್ತಿರುವ ಉನದ್ಕಟ್ಗೆ ಈ ರಿಟರ್ನ್ ತುಂಬಾ ವಿಶೇಷವಾಗಿದೆ. ವಾಸ್ತವವಾಗಿ, ಉನದ್ಕಟ್ 10 ವರ್ಷಗಳ ಹಿಂದೆ ಭಾರತದ ಪರ ಕೊನೆಯ ಏಕದಿನ ಪಂದ್ಯವನ್ನ ಆಡಿದ್ದರು.
4 / 7
ಅಂದರೆ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಉನದ್ಕಟ್ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅಂದಿನಿಂದ ಅವರಿಗೆ ಮತ್ತೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಈ ವರ್ಷದ ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಉನದ್ಕಟ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ.
5 / 7
ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಉನದ್ಕಟ್ ಅವರ 10 ವರ್ಷಗಳ ಕಾಯುವಿಕೆ ಕೊನೆಗೊಂಡಿದೆ. ಇದೀಗ ವೆಸ್ಟ್ ಇಂಡೀಸ್‌ನಲ್ಲಿ ಅವರ ಕಾಯುವಿಕೆ ಕೊನೆಗೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬುದು ಈಗ ಕುತೂಹಲಕಾರಿಯಾಗಿದೆ.
6 / 7
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯು ಭಾರತಕ್ಕೆ ಬಹಳ ಮುಖ್ಯವಾಗಿದೆ ಏಕೆಂದರೆ ಏಕದಿನ ವಿಶ್ವಕಪ್ ಈ ವರ್ಷ ಭಾರತದಲ್ಲಿ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಸರಣಿಯನ್ನು ವಿಶ್ವಕಪ್‌ನ ಕೊನೆಯ ಹಂತದ ತಯಾರಿಯ ಆರಂಭ ಎಂದೇ ಪರಿಗಣಿಸಲಾಗುತ್ತಿದೆ.
7 / 7
ಅಲ್ಲದೆ ವಿಶ್ವಕಪ್ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಉನದ್ಕಟ್ ಅವರಿಗೆ ಉತ್ತಮ ಅವಕಾಶ. ಉನದ್ಕಟ್ ಇದುವರೆಗೆ ಭಾರತ ಪರ 7 ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 8 ವಿಕೆಟ್ ಪಡೆದಿದ್ದಾರೆ.