- Kannada News Photo gallery Cricket photos India ODI World Cup 2023 schedule: India vs Pakistan Match Date
ODI World Cup 2023 schedule: ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
India ODI World Cup 2023 schedule: ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
Updated on:Jun 27, 2023 | 4:41 PM

ODI World Cup 2023 schedule: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ.

ಅಕ್ಟೋಬರ್ 5 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

4- ಭಾರತ vs ಬಾಂಗ್ಲಾದೇಶ್ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್ಪಿಸಿಎ ಸ್ಟೇಡಿಯಂ, ಧರ್ಮಶಾಲಾ

6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

ಅಂದರೆ ಲೀಗ್ ಹಂತದಲ್ಲಿ ಭಾರತ ತಂಡವು ಒಟ್ಟು 9 ಪಂದ್ಯಗಳನ್ನಾಡಲಿದೆ. ಇನ್ನು ಮೊದಲ ಸೆಮಿಫೈನಲ್ ಪಂದ್ಯವು ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದರೆ, 2ನೇ ಸೆಮಿಫೈನಲ್ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನವೆಂಬರ್ 16 ರಂದು ನಡೆಯಲಿದೆ.

ಹಾಗೆಯೇ ನವೆಂಬರ್ 19 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
Published On - 4:08 pm, Tue, 27 June 23
