IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?

Updated on: Feb 13, 2026 | 6:26 PM

India vs Pakistan T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಫೆಬ್ರವರಿ 15ರಂದು ಕೊಲಂಬೊದಲ್ಲಿ ಮತ್ತೆ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಉಭಯ ತಂಡಗಳು 8 ಬಾರಿ ಎದುರಾಗಿದ್ದು, ಭಾರತ 7 ಪಂದ್ಯಗಳಲ್ಲಿ ಗೆದ್ದು ಪಾಕಿಸ್ತಾನದ ಮೇಲೆ ಸ್ಪಷ್ಟ ಪ್ರಾಬಲ್ಯ ಸಾಧಿಸಿದೆ. ಭಾರತ-ಪಾಕ್ ಹೆಡ್ ಟು ಹೆಡ್ ದಾಖಲೆಗಳು ಮತ್ತು ಪ್ರಮುಖ ಪಂದ್ಯಗಳ ವಿವರಗಳನ್ನು ಇಲ್ಲಿ ತಿಳಿಯಿರಿ.

1 / 8
2026 ರ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಫೆಬ್ರವರಿ 15, 2026 ರಂದು ಕೊಲಂಬೊ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಿ20 ವಿಶ್ವಕಪ್ ಕಣದಲ್ಲಿ ಉಭಯ ತಂಡಗಳು 9ನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಮುಖಾಮುಖಿಯಲ್ಲಿ ಭಾರತ ತಂಡವು ಪಾಕಿಸ್ತಾನ ಮೇಲೆ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದೆ. ಹಾಗಿದ್ದರೆ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಡ್ ಟು ಹೆಡ್ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 8
ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 8 ಬಾರಿ ಮುಖಾಮುಖಿಯಾಗಿವೆ. ಈ 8 ಪಂದ್ಯಗಳಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. 2021 ರಲ್ಲಿ ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ, ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು.

3 / 8
2007 ರಲ್ಲಿ ನಡೆದ ಉದ್ಘಾಟನಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡು ಬಾರಿ ಮುಖಾಮುಖಿಯಾಗಿದ್ದವು. ಭಾರತ ತಂಡವು ಮೊದಲ ಲೀಗ್ ಹಂತದ ಪಂದ್ಯವನ್ನು ಬೌಲ್-ಔಟ್ ಮೂಲಕ ಗೆದ್ದಿತು. ಫೈನಲ್​ನಲ್ಲಿಯೂ ಭಾರತ ಮತ್ತು ಪಾಕಿಸ್ತಾನ ಮತ್ತೆ ಮುಖಾಮುಖಿಯಾಗಿದ್ದವು. ಇದರಲ್ಲಿ, ಎಂಎಸ್ ಧೋನಿ ನೇತೃತ್ವದ ಭಾರತ ತಂಡವು ಮಿಸ್ಬಾ-ಉಲ್-ಹಕ್ ನೇತೃತ್ವದ ಪಾಕಿಸ್ತಾನವನ್ನು ಸೋಲಿಸಿ ಚೊಚ್ಚಲ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿತು.

4 / 8
2012 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮೂರನೇ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ತಾನ 128 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು 17 ಓವರ್​ಗಳಲ್ಲಿ ಜಯದ ನಗೆಬೀರಿತು.

5 / 8
ಮಿರ್ಪುರ್​ನಲ್ಲಿ ನಡೆದ 2014 ರ ಟಿ20 ವಿಶ್ವಕಪ್ ಪಂದ್ಯದಲ್ಲಿಯೂ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 130 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 18.3 ಓವರ್​ಗಳಲ್ಲಿ ಗೆಲುವು ಸಾಧಿಸಿತು.

6 / 8
2016 ರ ಟಿ20 ವಿಶ್ವಕಪ್​ನಲ್ಲಿ ಈಡನ್ ಗಾರ್ಡನ್ಸ್​ನಲ್ಲಿ ಉಭಯ ತಂಡಗಳು ಪರಸ್ಪರ ಪಂದ್ಯಗಳನ್ನಾಡಿದ್ದವು. ತಲಾ 18 ಓವರ್​ ನಡೆದ ಈ ಪಂದ್ಯದಲ್ಲೂ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 118 ರನ್ ಕಲೆಹಾಕಿತು. ಭಾರತ ತಂಡ 15.5 ಓವರ್​ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು.

7 / 8
2021 ರಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್​ಗಳಿಂದ ಸೋತಿದ್ದ ಭಾರತ ತಂಡ 2022 ರ ಟಿ20 ವಿಶ್ವಕಪ್​ನಲ್ಲಿ ಹಳೆಯ ಸೋಲಿಗೆ ಸೇಡು ತೀರಿಸಿಕೊಂಡಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿ 159 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ 6 ವಿಕೆಟ್ ಕಳೆದುಕೊಂಡು ಕೊನೆಯ ಎಸೆತದಲ್ಲಿ ಗೆಲುವು ದಾಖಲಿಸಿತ್ತು.

8 / 8
ಇನ್ನು ಕಳೆದ ಆವೃತ್ತಿಯಲ್ಲಿ ಅಂದರೆ 2024 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಎರಡು ತಂಡಗಳು ನ್ಯೂಯಾರ್ಕ್​ನಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಕೇವಲ 119 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 113 ರನ್ ಕಲೆಹಾಕಲಷ್ಟೇ ಶಕ್ತವಾಗಿ 6 ರನ್​ಗಳಿಂದ ಸೋಲೊಪ್ಪಿಕೊಂಡಿತು.