
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯ ಶುಕ್ರವಾರ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಈ ಏಕದಿನ ಸರಣಿಯಲ್ಲಿ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂರು ಪಂದ್ಯಗಳಲ್ಲಿ ಯುವ ಆಟಗಾರರು ತಮ್ಮ ಶಕ್ತಿ ಪ್ರದರ್ಶಿಸುವ ನಿರೀಕ್ಷೆಯಿದೆ. ಏತನ್ಮಧ್ಯೆ, ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಯಾವುದು ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

ಮೊದಲ ಏಕದಿನ ಪಂದ್ಯದಲ್ಲಿ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ಸಿಗಬಹುದು ಎಂದು ನಂಬಲಾಗಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಅರ್ಷದೀಪ್ ಪಾದಾರ್ಪಣೆ ಮಾಡಿದ್ದು, 2 ವಿಕೆಟ್ ಪಡೆಯುವ ಮೂಲಕ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಅವರು ಚೊಚ್ಚಲ ಏಕದಿನ ಪಂದ್ಯವನ್ನಾಡುವ ವರದಿಗಳಿವೆ.


