AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಷ್ಠ ಪಡೆ: ಮೊದಲ ಟೆಸ್ಟ್​​ಗೆ ಟೀಮ್ ಇಂಡಿಯಾದ ಪ್ಲೇಯಿಂಗ್ 11

India vs West Indies Test Series: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಅಹಮದಾಬಾದ್​​ನ ನರೇಂದ್ರ ಮೋದಿ ಸ್ಡೇಡಿಯಂನಲ್ಲಿ ನಡೆದರೆ, ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on:Oct 01, 2025 | 2:32 PM

Share
ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಣ ಟೆಸ್ಟ್ ಸರಣಿ ನಾಳೆಯಿಂದ (ಅ.2) ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. 

1 / 6
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.

2 / 6
ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಈ ಕ್ರಮಾಂಕದಲ್ಲಿ ಪಡಿಕ್ಕಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 6
ಇನ್ನು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೆಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ.

4 / 6
ಹಾಗೆಯೇ ವೇಗಿಗಳಾಗಿ ಈ ಬಾರಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮಾತ್ರ ಕಾಣಿಸಿಕೊಳ್ಳಬಹುದು. ಏಕೆಂದರೆ ಅಹಮದಾಬಾದ್ ಪಿಚ್ ಸ್ಪಿನ್ ಬೌಲರ್​ಗಳಿಗೆ ಸಹಕಾರಿ. ಹೀಗಾಗಿ ಸಿರಾಜ್ ಹಾಗೂ ಬುಮ್ರಾ ಮಾತ್ರ ವೇಗಿಗಳಾಗಿ ಕಣಕ್ಕಿಳಿಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

5 / 6
ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 6

Published On - 2:30 pm, Wed, 1 October 25

Follow Us
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ

ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ

ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್

ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ

ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು

ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ