ಬುಮ್ರಾ, ಸಿರಾಜ್, ಹಾರ್ದಿಕ್ ಔಟ್: ಬಾಂಗ್ಲಾ ವಿರುದ್ಧದ ಇಂದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
India Playing XI vs Bangladesh, Asia Cup: ಇಂದಿನ ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್ 2023 ಸೂಪರ್-4 ಪಂದ್ಯದಿಂದ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆಯಂತೆ. ಇವರ ಬದಲು ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಮತ್ತು ಶಾರ್ದೂಲ್ ಥಾಕೂರ್ ಅವರು ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
1 / 7
ಏಷ್ಯಾಕಪ್ 2023 ಟೂರ್ನಿ (Asia Cup 2023) ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ ಫೈನಲ್ ಪಂದ್ಯ ಭಾರತ ಹಾಗೂ ಶ್ರೀಲಂಕಾ ನಡುವೆ ಎಂಬುದು ತೀರ್ಮಾನವಾಗಿದೆ. ಇದರ ನಡುವೆ ಇಂದು ಏಷ್ಯಾಕಪ್ ಸೂಪರ್-4 ನ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ.
2 / 7
ಉಭಯ ತಂಡಗಳಿಗೆ ಇಂದು ಔಪಚಾರಿಕ ಪಂದ್ಯವಷ್ಟೆ. ಹೀಗಾಗಿ ಟೀಮ್ ಇಂಡಿಯಾ ದೊಡ್ಡ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತ. ಪ್ರಮುಖ ಹಿರಿಯ ಆಟಗಾರರು ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಇದೆ. ಹಾಗಾದರೆ ಇಂದಿನ ಪಂದ್ಯದಿಂದ ಯಾರಿಗೆಲ್ಲ ವಿಶ್ರಾಂತಿ ನೀಡಲಾಗುತ್ತೆ?.
3 / 7
ಮೂಲಗಳ ಪ್ರಕಾರ, ಇಂದಿನ ಬಾಂಗ್ಲಾ ವಿರುದ್ಧದ ಪಂದ್ಯದಿಂದ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆಯಂತೆ. ಇವರ ಬದಲು ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಮತ್ತು ಶಾರ್ದೂಲ್ ಥಾಕೂರ್ ಅವರು ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
4 / 7
ಉಳಿದಂತೆ ಭಾರತ ಪರ ಓಪನರ್ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಆಡಲಿದ್ದಾರೆ. ನಂತರದಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಕೂಡ ಇರಲಿದ್ದಾರೆ.
5 / 7
ಭಾರತ-ಬಾಂಗ್ಲಾ ಪಂದ್ಯ ನಡೆಯಲಿರುವ ಆರ್. ಪ್ರೇಮದಾಸ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಪಂದ್ಯ ಸಾಗಿದಂತೆ ಟ್ರ್ಯಾಕ್ ನಿಧಾನವಾಗುತ್ತದೆ, ಆಗ ಬ್ಯಾಟರ್‌ಗಳಿಗೆ ರನ್ ಗಳಿಸಲು ಕಷ್ಟವಾಗುತ್ತದೆ. ಮತ್ತೊಂದೆಡೆ, ವೇಗದ ಬೌಲರ್‌ಗಳು ಕೂಡ ಈ ಮೈದಾನದಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯದ ಮಧ್ಯದಲ್ಲಿ ಬ್ಯಾಟರ್‌ಗಳಿಗೆ ಈ ಪಿಚ್ ಹೆಚ್ಚು ಸಹಾಯ ಮಾಡಲಿದೆ.
6 / 7
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
7 / 7
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್ ಬಿಜೋಯ್, ಲಿಟ್ಟನ್ ದಾಸ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೋ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರಹಮಾನ್, ಶೊರಿಫುಲ್ ಇಸ್ಲಾಂ, ಶಾಕ್ ಮಹ್ಮದ್ ಇಸ್ಲಾಂ, ನಾಸ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝೀದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.