ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ: ಯಾರಿಗೆ ಚಾನ್ಸ್?
India vs Australia T20 Series: ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಹೋಬಾರ್ಟ್ನಲ್ಲಿ ಆಡಲಾಗುತ್ತದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಿಗೆ ಕ್ಯಾರರಾ ಹಾಗೂ ಬ್ರಿಸ್ಬೇನ್ ಆತಿಥ್ಯವಹಿಸಲಿದೆ.
Updated on: Oct 28, 2025 | 2:23 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಲಿದೆ. ಕ್ಯಾನ್ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ.

ಏಕೆಂದರೆ ಏಷ್ಯಾಕಪ್ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.




