- Kannada News Photo gallery Cricket photos India Probable Playing XI vs Australia ICC World Test Championship Final 2023
India Plying XI vs AUS Final: ಒಂದು ಸ್ಥಾನಕ್ಕೆ ಇಬ್ಬರ ಪೈಪೋಟಿ: ರೋಚಕತೆ ಸೃಷ್ಟಿಸಿದ ಭಾರತದ ಪ್ಲೇಯಿಂಗ್ ಇಲೆವೆನ್
WTC 2023 Final, IND vs AUS: ಟೀಮ್ ಇಂಡಿಯಾ ತನ್ನ ಕೆಲ ಪ್ರಮುಖ ಆಟಗಾರರ ಅಲಭ್ಯತೆಯಲ್ಲಿ ಕಣಕ್ಕಿಳಿಯುತ್ತಿದೆ. ಹೀಗಿದ್ದರೂ ಭಾರತ ತಂಡ ಬಲಿಷ್ಠವಾಗಿದೆ. ಇಲ್ಲಿದೆ ನೋಡಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.
Updated on: Jun 07, 2023 | 10:34 AM

ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಇಂದು ಚಾಲನೆ ಸಿಗಲಿದೆ. ಕೆನ್ನಿಂಗ್ಟನ್ನ ಓವಲ್ ಮೈದಾನದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಟೀಮ್ ಇಂಡಿಯಾ ತನ್ನ ಕೆಲ ಪ್ರಮುಖ ಆಟಗಾರರ ಅಲಭ್ಯತೆಯಲ್ಲಿ ಕಣಕ್ಕಿಳಿಯುತ್ತಿದೆ. ಗಾಯದ ಸಮಸ್ಯೆ ಎದುರಿಸುತ್ತಿರುವ ರಿಷಭ್ ಪಂತ್, ಜಸ್‌ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್ ರಾಹುಲ್ ಈ ಪಂದ್ಯಕ್ಕಿಲ್ಲ.

ಕೆಲ ಆಟಗಾರರ ಅನುಪಸ್ಥಿತಿ ಇದ್ದರೂ ಭಾರತ ತಂಡ ಬಲಿಷ್ಠವಾಗಿದೆ. ಫೈನಲ್ ಪಂದ್ಯಕ್ಕೆ ಭಾರತ ಪರ ಓಪನರ್ಗಳಾಗಿ ನಾಯಕ ರೋಹಿತ್ ಶರ್ಮಾ ಮತ್ತು ಭರ್ಜರಿ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ.

ಮೂರನೇ ಮತ್ತು ನಾಲ್ಕನೇ ಸ್ಥಾನ ಕೂಡ ಖಚಿತವಾಗಿದೆ. ಇಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಮತ್ತು ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಆಡಲಿದ್ದಾರೆ.

ಅಜಿಂಕ್ಯ ರಹಾನೆ ಐದನೇ ಸ್ಥಾನದಲ್ಲಿ ಆಡಿದರೆ ರವೀಂದ್ರ ಜಡೇಜಾ ನಂತರದ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ವಿಕೆಟ್ ಕೀಪರ್ ಜವಾಬ್ದಾರಿ ಕೆಎಸ್ ಭರತ್ ವಹಿಸುವುದು ಖಚಿತ.

ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಪ್ರಮುಖ ವೇಗಿಗಳಾಗಿದ್ದಾರೆ. ಆದರೆ, ಇನ್ನೊಂದು ಸ್ಥಾನಕ್ಕೆ ರವಿಚಂದ್ರನ್ ಅಶ್ವಿನ್ ಮತ್ತು ಉಮೇಶ್ ಯಾದವ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇವರಿಬ್ಬರಲ್ಲಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆಎಸ್ ಭರತ್, ಶಾರ್ದೂಲ್ ಠಾಕೂರ್, ರವಿ ಅಶ್ವಿನ್/ ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
