AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೊಹ್ಲಿಯ ಶತಕ ಇವರಿಬ್ಬರ ಕೊಡುಗೆಯನ್ನು ಮರೆಮಾಚಿತು; ಕೆ. ಶ್ರೀಕಾಂತ್

India vs South Africa ODI: ರಾಂಚಿ ಏಕದಿನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 17 ರನ್ ಗಳ ಭರ್ಜರಿ ಜಯ ಸಾಧಿಸಿತು. ವಿರಾಟ್ ಕೊಹ್ಲಿ ಶತಕ, ಕುಲ್ದೀಪ್-ಹರ್ಷಿತ್ ಬೌಲಿಂಗ್ ಪ್ರಮುಖ ಪಾತ್ರವಹಿಸಿದರೂ, ಮಾಜಿ ಆಯ್ಕೆದಾರ ಕೃಷ್ಣಮಾಚಾರಿ ಶ್ರೀಕಾಂತ್ ಕೆಎಲ್ ರಾಹುಲ್ (60) ಮತ್ತು ರವೀಂದ್ರ ಜಡೇಜಾ (32) ಅವರ ನಿರ್ಣಾಯಕ 65 ರನ್ ಪಾಲುದಾರಿಕೆಯನ್ನು ಶ್ಲಾಘಿಸಿದ್ದಾರೆ. ಅವರ ಕೊಡುಗೆ ಕೊಹ್ಲಿ ಶತಕದಿಂದ ಮರೆಮಾಚಲ್ಪಟ್ಟಿದೆ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಪೃಥ್ವಿಶಂಕರ
|

Updated on:Dec 01, 2025 | 10:30 PM

Share
ಭಾನುವಾರ ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಪ್ರಿಕಾ ತಂಡವನ್ನು 17 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ಗೆಲುವಿನ ಆರಂಭ ಪಡೆದುಕೊಂಡಿದೆ. ತಂಡದ ಈ ಗೆಲುವಿನ ವಿರಾಟ್ ಕೊಹ್ಲಿ ಅವರ ಶತಕ ಹಾಗೂ ಕುಲ್ದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಅವರ ಮಾರಕ ದಾಳಿ ಪ್ರಮುಖ ಕಾರಣವಾಗಿತ್ತು. ಈ ಮೂವರ ಜೊತೆಗೆ ಇವರಿಬ್ಬರ ಆಟವೂ ಪ್ರಮುಖ ಕೊಡುಗೆ ನೀಡಿತು ಎಂದು ಮಾಜಿ ಆಯ್ಕೆದಾರ ಕೃಷ್ಣಮಾಚಾರಿ ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

1 / 5
ಮೊದಲ ಏಕದಿನ ಪಂದ್ಯ ಮುಗಿದ ಬಳಿಕ ಮಾತನಾಡಿರುವ 1983 ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದ ಕೃಷ್ಣಮಾಚಾರಿ ಶ್ರೀಕಾಂತ್, ವಿರಾಟ್ ಕೊಹ್ಲಿ ಅವರ ಶತಕವು ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಅವರ ಕಠಿಣ ಪರಿಶ್ರಮವನ್ನು ಮರೆಮಾಡಿದೆ. ಇಬ್ಬರಿಗೂ ಅರ್ಹವಾದ ಪ್ರಶಂಸೆ ಸಿಗಲಿಲ್ಲ ಎಂದಿದ್ದಾರೆ.

2 / 5
ಈ ಪಂದ್ಯದಲ್ಲಿ ಆರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ ಕೆ.ಎಲ್. ರಾಹುಲ್ ಅದ್ಭುತ ಅರ್ಧಶತಕ ಬಾರಿಸಿದ್ದು ಮಾತ್ರವಲ್ಲದೆ ರವೀಂದ್ರ ಜಡೇಜಾ ಅವರೊಂದಿಗೆ ಆರನೇ ವಿಕೆಟ್‌ಗೆ 36 ಎಸೆತಗಳಲ್ಲಿ 65 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಾಹುಲ್ 60 ರನ್ ಗಳಿಸಿದರೆ, ಜಡೇಜಾ 32 ರನ್ ಗಳಿಸಿದರು. ಇವರಿಬ್ಬರ ಜೊತೆಯಾಟದಿಂದಾಗಿ ಭಾರತದ ಸ್ಕೋರ್ 300 ರ ಗಡಿ ದಾಟಿತು.

3 / 5
ಇವರಿಬ್ಬರ ಆಟವನ್ನು ಹೊಗಳಿರುವ ಕೃಷ್ಣಮಾಚಾರಿ ಶ್ರೀಕಾಂತ್, ‘ರಾಹುಲ್ ಮತ್ತು ಜಡೇಜಾ ಅವರ ಇನ್ನಿಂಗ್ಸ್ ಗಮನಕ್ಕೆ ಬರಲಿಲ್ಲ. ಅವರು ವಾಸ್ತವವಾಗಿ ಬೇರೆಯದೇ ಮಟ್ಟದಲ್ಲಿ ಆಡಿದರು. ಕೆಎಲ್ ರಾಹುಲ್ ಮತ್ತು ಜಡೇಜಾ ನಡುವಿನ ಕೊನೆಯ ಪಾಲುದಾರಿಕೆ ಅದ್ಭುತವಾಗಿತ್ತು ಆದರೆ ಅದು ಗಮನಕ್ಕೆ ಬರಲಿಲ್ಲ. ಇದು ನಿರ್ಣಾಯಕ ಅಂಶವಾಗಿತ್ತು ಮತ್ತು ಇಬ್ಬರೂ, ಪಾಲುದಾರಿಕೆಯಲ್ಲಿ ಅವರ ಸ್ಟ್ರೈಕ್ ರೇಟ್‌ಗಳನ್ನು ಪರಿಗಣಿಸಿ, ಬೌಲರ್​ಗಳು ಲಯ ಕಳೆದುಕೊಳ್ಳುವಂತೆ ಮಾಡಿದರು. ಆದರೆ ವಿರಾಟ್ ಕೊಹ್ಲಿಯ ಇನ್ನಿಂಗ್ಸ್ ಎಲ್ಲವನ್ನೂ ಮರೆಮಾಚಿತು. ಇವರಿಬ್ಬರು ಯಾವುದೇ ಶಬ್ದ ಮಾಡದೆ ಸದ್ದಿಲ್ಲದೆ ಕೆಲಸ ಮಾಡಿದರು ಎಂದಿದ್ದಾರೆ.

4 / 5
ಇದರ ಜೊತೆಗೆ ವಾಷಿಂಗ್ಟನ್ ಸುಂದರ್ ಅವರನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಕಳುಹಿಸುವ ನಿರ್ಧಾರವನ್ನು ಪ್ರಶ್ನಿಸಿದ ಶ್ರೀಕಾಂತ್, ‘ವಾಷಿಂಗ್ಟನ್ ಸುಂದರ್ ಅವರಿಗಿಂತ ಮುಂದೆ ಹೋಗುತ್ತಾರೋ ಇಲ್ಲವೋ ಗೊತ್ತಿಲ್ಲ. ಕೆಎಲ್ ರಾಹುಲ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಮೇಲೆ ಬಂದಿದ್ದರೆ, ಭಾರತಕ್ಕೆ ಉತ್ತಮವಾಗುತ್ತಿತ್ತು. ಅವರು ಎಂದಿಗೂ 5ನೇ ಕ್ರಮಾಂಕಕ್ಕಿಂತ ಕೆಳಗಿಳಿಯಬಾರದು. ಅವರು 4 ಅಥವಾ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು. 5ನೇ ಕ್ರಮಾಂಕದಲ್ಲಿ ಬರುವ ಬದಲು, ವಾಷಿಂಗ್ಟನ್ ಸುಂದರ್ ಫಿನಿಷರ್ ಆಗಿ ಆಡಬಹುದು ಎಂದಿದ್ದಾರೆ.

5 / 5

Published On - 10:30 pm, Mon, 1 December 25

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ