AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ICC Women's World Cup 2025: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ಸೆಪ್ಟೆಂಬರ್ 30 ರಿಂದ ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದ್ದು, ಅದರಂತೆ ಭಾರತ, ಪಾಕಿಸ್ತಾನ್, ಶ್ರೀಲಂಕಾ, ಬಾಂಗ್ಲಾದೇಶ್, ನ್ಯೂಝಿಲೆಂಡ್, ಇಂಗ್ಲೆಂಡ್, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ ತಂಡಗಳು ಏಕದಿನ ವಿಶ್ವಕಪ್ ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿದೆ.

ಝಾಹಿರ್ ಯೂಸುಫ್
|

Updated on: Jun 17, 2025 | 8:55 AM

Share
ಮಹಿಳಾ ಏಕದಿನ ವಿಶ್ವಕಪ್ 2025ರ (Women's World Cup 2025) ವೇಳಾಪಟ್ಟಿ ಪ್ರಕಟವಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಿಂದ ಶುರವಾಗಲಿದೆ. ಇನ್ನು ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದ್ದು, ಟೂರ್ನಿಯ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಪಾಕಿಸ್ತಾನ್ ಅಲ್ಲದೆ, ಭಾರತ ತಂಡ ಎದುರಿಸಲಿರುವ ತಂಡಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 8
ಭಾರತ vs ಶ್ರೀಲಂಕಾ: ಸೆಪ್ಟೆಂಬರ್ 30 ರಂದು ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್​ನ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ತಂಡಗಳಾದ ಭಾರತ ಮತ್ತು ಶ್ರೀಲಂಕಾ ಕಣಕ್ಕಿಳಿಯಲಿವೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿರುವುದು ವಿಶೇಷ. 

2 / 8
ಭಾರತ vs ಪಾಕಿಸ್ತಾನ್: ಟೀಮ್ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 5 ರಂದು ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕೆ ಶ್ರೀಲಂಕಾದ ಕೊಲಂಬೊದಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 8
ಭಾರತ vs ಸೌತ್ ಆಫ್ರಿಕಾ: ಭಾರತ ತಂಡದ ಮೂರನೇ ಎದುರಾಳಿ ಸೌತ್ ಆಫ್ರಿಕಾ. ಅಕ್ಟೋಬರ್ 9 ರಂದು ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ.

4 / 8
ಭಾರತ vs ಆಸ್ಟ್ರೇಲಿಯಾ: ಅಕ್ಟೋಬರ್ 12 ರಂದು ಟೀಮ್ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ವಿಶಾಖಪಟ್ಟಣದ ಎಸಿಎ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಮೂಲಕ ಟೀಮ್ ಇಂಡಿಯಾ ಮಹಿಳಾ ಏಕದಿನ ವಿಶ್ವಕಪ್​ನ ಮೊದಲ ಸುತ್ತಿನ 4ನೇ ಪಂದ್ಯವನ್ನಾಡಲಿದೆ.

5 / 8
ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾದ 5ನೇ ಎದುರಾಳಿ ಇಂಗ್ಲೆಂಡ್. ಅಕ್ಟೋಬರ್ 19 ರಂದು ಇಂದೋರ್​ನ ಹೋಲ್ಕರ್ ಕ್ರಿಕೆಟ್​ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆಯಿಂದ ಅತ್ಯುತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು. 

6 / 8
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್ 23 ರಂದು ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಟೀಮ್ ಇಂಡಿಯಾ ಹಾಗೂ ಕಿವೀಸ್ ಪಡೆಗಳ ನಡುವಣ ಈ ಪಂದ್ಯಕ್ಕೆ ಗೌವಾಹಟಿಯ ಬರ್ಸಪಾರ ಕ್ರೀಡಾಂಗಣ ಆತಿಥ್ಯವಹಿಸಲಿದೆ.

7 / 8
ಭಾರತ vs ಬಾಂಗ್ಲಾದೇಶ್: ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 26 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಭಾರತ ತಂಡವು ಮೊದಲ ಸುತ್ತನ್ನು ಪೂರ್ಣಗೊಳಿಸಲಿದೆ. ಇನ್ನು ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 29 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ನವೆಂಬರ್ 1 ರಂದು ಜರುಗಲಿದೆ.

8 / 8