ಎಡಗೈ ದಾಂಡಿಗರೊಂದಿಗೆ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
India vs England: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಇಂಗ್ಲೆಂಡ್ 19 ಓವರ್ಗಳಲ್ಲಿ ಚೇಸ್ ಮಾಡಿ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ನಡುವೆ ಟೀಮ್ ಇಂಡಿಯಾ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.
Updated on: Jul 05, 2026 | 8:41 AM

ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಎಂತಹ ವಿಭಿನ್ನ ಪ್ರಯೋಗಗಳಿಗಾದರೂ ಸಿದ್ಧ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಜುಲೈ 4, 2026 ರಂದು ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ, ಭಾರತ ತಂಡವು ಎಡಗೈ ದಾಂಡಿಗರೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ. (PC: BCCI)

ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ 6 ಎಡಗೈ ದಾಂಡಿಗರು ಕಣಕ್ಕಿಳಿದಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟಾಪ್-7 ಬ್ಯಾಟರ್ಗಳಲ್ಲಿ ಆರು ಎಡಗೈ ಬ್ಯಾಟ್ಸ್ಮನ್ಗಳನ್ನು ಕಣಕ್ಕಿಳಿಸಿದ ವಿಶೇಷ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. (PC: BCCI)

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಎಡಗೈ ದಾಂಡಿಗರಾಗಿ ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಕಣಕ್ಕಿಳಿದಿದ್ದರು. ಇನ್ನು ಟಾಪ್-7 ನಲ್ಲಿ ಕಾಣಿಸಿಕೊಂಡ ಏಕೈಕ ಬಲಗೈ ಬ್ಯಾಟರ್ ನಾಯಕ ಶ್ರೇಯಸ್ ಅಯ್ಯರ್ ಮಾತ್ರ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 6 ಮಂದಿ ಲೆಫ್ಟ್ ಹ್ಯಾಂಡರ್ಗಳನ್ನು ಕಣಕ್ಕಿಳಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ. (PC: BCCI)

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡವು ಟಿ20 ಪಂದ್ಯದಲ್ಲಿ ಐವರು ಎಡಗೈ ದಾಂಡಿಗರೊಂದಿಗೆ ಕಣಕ್ಕಿಳಿದಿತ್ತು. ಕ್ರಿಸ್ ಗೇಲ್, ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ಎವಿನ್ ಲೂಯಿಸ್ ಮತ್ತು ಡ್ಯಾರೆನ್ ಬ್ರಾವೋ ಜೊತೆಯಾಗಿ ಕಣಕ್ಕಿಳಿದು ಹೊಸ ಇತಿಹಾಸ ನಿರ್ಮಿಸಿದ್ದರು. (PC: BCCI)

ಇದೀಗ 6 ಮಂದಿ ಎಡಗೈ ದಾಂಡಿಗರೊಂದಿಗೆ ಹೊಸ ವಿಶ್ವ ವಿಶ್ವ ದಾಖಲೆ ನಿರ್ಮಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟಾಪ್-7 ಬ್ಯಾಟರ್ಗಳ ಪೈಕಿ ಆರು ಮಂದಿ ಲೆಫ್ಟ್ ಹ್ಯಾಂಡರ್ಗಳನ್ನು ಕಣಕ್ಕಿಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)




