WTC 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲೂ ಭಾರತಕ್ಕೆ ಆಘಾತ

WTC 2023-25 Points Table: 2023 ರಿಂದ 2025 ರವರೆಗೆ ನಡೆಯುವ ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧ ಸೋತಿರುವ ಭಾರತ ತಂಡ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲೂ ಕುಸಿತ ಕಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 29, 2024 | 7:24 AM

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯರನ್ನು 28 ರನ್​ಗಳಿಂದ ಸೋಲುಣಿಸಿ ಆಂಗ್ಲರು ಶುಭಾರಂಭ ಮಾಡಿದ್ದಾರೆ.

1 / 7
ಈ ಸೋಲಿನೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಟೇಬಲ್​ನಲ್ಲೂ ಕುಸಿತ ಕಂಡಿದೆ. ಅಂದರೆ WTC ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಭಾರತ ತಂಡವು ಒಂದೇ ಒಂದು ಹೀನಾಯ ಸೋಲಿನೊಂದಿಗೆ ಮೂರು ಸ್ಥಾನಗಳನ್ನು ಕಳೆದುಕೊಂಡಿದೆ.

2 / 7
ಅದರಂತೆ ಇದೀಗ WTC ಪಾಯಿಂಟ್ಸ್​ ಟೇಬಲ್​ನಲ್ಲಿ ಭಾರತ ತಂಡವು 5ನೇ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ ಗೆದ್ದರೂ ಇಂಗ್ಲೆಂಡ್ ತಂಡ 8ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದಾಗ್ಯೂ ಒಟ್ಟು 21 ಪಾಯಿಂಟ್ಸ್ ಕಲೆಹಾಕುವಲ್ಲಿ ಆಂಗ್ಲ ಪಡೆ ಯಶಸ್ವಿಯಾಗಿದೆ.

3 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಭಾರತ ತಂಡವು 2 ರಲ್ಲಿ ಜಯ ಸಾಧಿಸಿದರೆ, ಮತ್ತೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

4 / 7
ಮತ್ತೊಂದೆಡೆ ಇಂಗ್ಲೆಂಡ್ ತಂಡವು ಇದುವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ 3 ರಲ್ಲಿ ಜಯ ಸಾಧಿಸಿದರೆ, 2 ಪಂದ್ಯಗಳಲ್ಲಿ ಸೋತಿದೆ. ಹಾಗೆಯೇ 1 ಮ್ಯಾಚ್ ಅನ್ನು ಡ್ರಾ ಮಾಡಿಕೊಂಡಿದೆ. ಇಲ್ಲಿ ಗೆಲುವು ಮತ್ತು ಡ್ರಾ ಪಂದ್ಯಗಳ ಶೇಕಡಾವಾರನ್ನು ಪರಿಗಣಿಸುವುದರಿಂದ 6 ಮ್ಯಾಚ್​ಗಳಲ್ಲಿ 3 ಪಂದ್ಯ ಗೆದ್ದರೂ ಇಂಗ್ಲೆಂಡ್ ತಂಡ 8ನೇ ಸ್ಥಾನದಲ್ಲೇ ಉಳಿದುಕೊಂಡಿದೆ.

5 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ (55%) ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ತಂಡ (50%) ದ್ವಿತೀಯ ಸ್ಥಾನದಲ್ಲಿದೆ. ಇನ್ನು ನ್ಯೂಝಿಲೆಂಡ್ (50%) ಹಾಗೂ ಬಾಂಗ್ಲಾದೇಶ್ (50%) ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ. ಹಾಗೆಯೇ ಇದೀಗ ಭಾರತ ತಂಡ (43.33%) ಸ್ಥಾನಕ್ಕೆ ಕುಸಿದಿದೆ.

6 / 7
ಐಸಿಸಿ ಪ್ರಕಟಿಸಿರುವ (ಜ.29) ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಹೊಸ ಅಂಕ ಪಟ್ಟಿ ಹೀಗಿದೆ.

7 / 7
Follow us
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​

ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು

Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ

ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು