WTC 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲೂ ಭಾರತಕ್ಕೆ ಆಘಾತ
TV9 Web | Updated By: ಝಾಹಿರ್ ಯೂಸುಫ್
Updated on:
Jan 29, 2024 | 7:24 AM
WTC 2023-25 Points Table: 2023 ರಿಂದ 2025 ರವರೆಗೆ ನಡೆಯುವ ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧ ಸೋತಿರುವ ಭಾರತ ತಂಡ ಇದೀಗ ಪಾಯಿಂಟ್ಸ್ ಟೇಬಲ್ನಲ್ಲೂ ಕುಸಿತ ಕಂಡಿದೆ.
1 / 7
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯರನ್ನು 28 ರನ್ಗಳಿಂದ ಸೋಲುಣಿಸಿ ಆಂಗ್ಲರು ಶುಭಾರಂಭ ಮಾಡಿದ್ದಾರೆ.
2 / 7
ಈ ಸೋಲಿನೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಟೇಬಲ್ನಲ್ಲೂ ಕುಸಿತ ಕಂಡಿದೆ. ಅಂದರೆ WTC ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಭಾರತ ತಂಡವು ಒಂದೇ ಒಂದು ಹೀನಾಯ ಸೋಲಿನೊಂದಿಗೆ ಮೂರು ಸ್ಥಾನಗಳನ್ನು ಕಳೆದುಕೊಂಡಿದೆ.
3 / 7
ಅದರಂತೆ ಇದೀಗ WTC ಪಾಯಿಂಟ್ಸ್ ಟೇಬಲ್ನಲ್ಲಿ ಭಾರತ ತಂಡವು 5ನೇ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ ಗೆದ್ದರೂ ಇಂಗ್ಲೆಂಡ್ ತಂಡ 8ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದಾಗ್ಯೂ ಒಟ್ಟು 21 ಪಾಯಿಂಟ್ಸ್ ಕಲೆಹಾಕುವಲ್ಲಿ ಆಂಗ್ಲ ಪಡೆ ಯಶಸ್ವಿಯಾಗಿದೆ.
4 / 7
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಭಾರತ ತಂಡವು 2 ರಲ್ಲಿ ಜಯ ಸಾಧಿಸಿದರೆ, ಮತ್ತೆರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
5 / 7
ಮತ್ತೊಂದೆಡೆ ಇಂಗ್ಲೆಂಡ್ ತಂಡವು ಇದುವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ 3 ರಲ್ಲಿ ಜಯ ಸಾಧಿಸಿದರೆ, 2 ಪಂದ್ಯಗಳಲ್ಲಿ ಸೋತಿದೆ. ಹಾಗೆಯೇ 1 ಮ್ಯಾಚ್ ಅನ್ನು ಡ್ರಾ ಮಾಡಿಕೊಂಡಿದೆ. ಇಲ್ಲಿ ಗೆಲುವು ಮತ್ತು ಡ್ರಾ ಪಂದ್ಯಗಳ ಶೇಕಡಾವಾರನ್ನು ಪರಿಗಣಿಸುವುದರಿಂದ 6 ಮ್ಯಾಚ್ಗಳಲ್ಲಿ 3 ಪಂದ್ಯ ಗೆದ್ದರೂ ಇಂಗ್ಲೆಂಡ್ ತಂಡ 8ನೇ ಸ್ಥಾನದಲ್ಲೇ ಉಳಿದುಕೊಂಡಿದೆ.
6 / 7
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ (55%) ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ತಂಡ (50%) ದ್ವಿತೀಯ ಸ್ಥಾನದಲ್ಲಿದೆ. ಇನ್ನು ನ್ಯೂಝಿಲೆಂಡ್ (50%) ಹಾಗೂ ಬಾಂಗ್ಲಾದೇಶ್ (50%) ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ. ಹಾಗೆಯೇ ಇದೀಗ ಭಾರತ ತಂಡ (43.33%) ಸ್ಥಾನಕ್ಕೆ ಕುಸಿದಿದೆ.
7 / 7
ಐಸಿಸಿ ಪ್ರಕಟಿಸಿರುವ (ಜ.29) ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಹೊಸ ಅಂಕ ಪಟ್ಟಿ ಹೀಗಿದೆ.