AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ 9 ಆಟಗಾರರು ಔಟ್..!

India Squad: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿಯು ಜೂನ್ 6 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಗಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 14 ಸದಸ್ಯರುಗಳ ಈ ತಂಡಗಳಲ್ಲಿ ಕೆಲ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ. ಆ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 19, 2026 | 6:00 PM

Share
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 14 ಸದಸ್ಯರುಗಳ ಈ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಂಡರೆ, ಉಪನಾಯಕರುಗಳಾಗಿ ಕೆಎಲ್ ರಾಹುಲ್ (ಟೆಸ್ಟ್) ಹಾಗೂ ಶ್ರೇಯಸ್ ಅಯ್ಯರ್ (ಏಕದಿನ) ಆಯ್ಕೆಯಾಗಿದ್ದಾರೆ. ಇನ್ನು ಕಳೆದ ಬಾರಿ ತಂಡದಲ್ಲಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ... (PC: gettyimages)

1 / 12
ಅಕ್ಷರ್ ಪಟೇಲ್: ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿದ್ದ ಅಕ್ಷರ್ ಪಟೇಲ್ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಕಳಪೆ ಫಾರ್ಮ್​ನಲ್ಲಿರುವ ಅಕ್ಷರ್ ಪಟೇಲ್ ಬದಲಿಗೆ ಈ ಸಲ ವಾಷಿಂಗ್ಟನ್ ಸುಂದರ್​ಗೆ ಸ್ಥಾನ ನೀಡಲಾಗಿದೆ. (PC: gettyimages)

2 / 12
ರಿಷಭ್ ಪಂತ್: ಭಾರತ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗುತ್ತಿದ್ದ ರಿಷಭ್ ಪಂತ್ ಅವರನ್ನು ಈ ಬಾರಿ ಕೈ ಬಿಡಲಾಗಿದೆ. ಕಳಪೆ ಫಾರ್ಮ್ ಕಾರಣ ಪಂತ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ತಿಳಿದು ಬಂದಿದೆ. ಇದಾಗ್ಯೂ ಪಂತ್ ಟೆಸ್ಟ್ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. (PC: gettyimages)

3 / 12
 ವರುಣ್ ಚಕ್ರವರ್ತಿ: ಚಾಂಪಿಯನ್ಸ್ ಟ್ರೋಫಿ ವೇಳೆ ಅತ್ಯುತ್ತಮ ಸ್ಪಿನ್ ದಾಳಿಯೊಂದಿಗೆ ಮಿಂಚಿದ್ದ ವರುಣ್ ಚಕ್ರವರ್ತಿಗೂ ಈ ಬಾರಿ ಸ್ಥಾನ ಲಭಿಸಿಲ್ಲ. ಬದಲಾಗಿ ಕುಲ್ದೀಪ್ ಯಾದವ್ ಹಾಗೂ ಹರ್ಷ್ ದುಬೆ ಪರಿಪೂರ್ಣ ಸ್ಪಿನ್ನರ್​ಗಳಾಗಿ ಆಯ್ಕೆಯಾಗಿದ್ದಾರೆ. (PC: gettyimages)

4 / 12
ರವೀಂದ್ರ ಜಡೇಜಾ: ಭಾರತ ತಂಡದ ಸ್ಪಿನ್ ಆಲ್​ರೌಂಡರ್ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಮುಂದಿನ ಸರಣಿ ವೇಳೆ ಜಡೇಜಾ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: gettyimages)

5 / 12
ಹರ್ಷಿತ್ ರಾಣಾ: ಭಾರತ ಏಕದಿನ ತಂಡದಲ್ಲಿ ಖಾಯಂ ಸದಸ್ಯನಾಗಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹರ್ಷಿತ್ ಬದಲಿಗೆ ಪ್ರಿನ್ಸ್ ಯಾದವ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. (PC: gettyimages)

6 / 12
ಸಂಜು ಸ್ಯಾಮ್ಸನ್: ಭಾರತ ಏಕದಿನ ತಂಡದಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಂಜು ಸ್ಯಾಮ್ಸನ್ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿದ್ದಾರೆ. (PC: gettyimages)

7 / 12
ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ನಿರ್ಲಕ್ಷಿಸಿದ್ದಾರೆ. ಅಂಸರೆ ಬಿಸಿಸಿಐ ಆಯ್ಕೆ ಸಮಿತಿ ಶಮಿ ಅವರ ಆಯ್ಕೆಗೆ ಯಾವುದೇ ಆಸಕ್ತಿ ತೋರಿಲ್ಲ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಶಮಿ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು. (PC: gettyimages)

8 / 12
ಜಸ್​​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅವರಿಗೂ ವರ್ಕ್​ಲೋಡ್ ಬ್ಯಾಲೆನ್ಸ್ ಮಾಡಲು ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬುಮ್ರಾ ಕೂಡ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: gettyimages)

9 / 12
ಆಕಾಶ್ ದೀಪ್: ಭಾರತ ಟೆಸ್ಟ್ ತಂಡದಲ್ಲಿ ವೇಗದ ಬೌಲರ್​ಗೀ ಕಾಣಿಸಿಕೊಳ್ಳುತ್ತಿದ್ದ ಆಕಾಶ್ ದೀಪ್ ಅವರನ್ನು ಕೂಡ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಗುರ್ನೂರ್ ಬ್ರಾರ್ ಆಯ್ಕೆಯಾಗಿದ್ದಾರೆ.  (PC: gettyimages)

10 / 12
ಭಾರತ ಏಕದಿನ ತಂಡ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ. (PC: BCCI)

11 / 12
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್. (PC: BCCI)

12 / 12
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ