
ಸೌತ್ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದ ನಾಲ್ವರು ಆಟಗಾರರು ಈ ಸರಣಿಗೆ ಆಯ್ಕೆಯಾಗಿಲ್ಲ. ಅವರ ಬದಲಿಗೆ ಈ ಬಾರಿ ತಂಡದಲ್ಲಿ ಸ್ಥಾನ ಪಡೆದವರ ಪಟ್ಟಿ ಈ ಕೆಳಗಿನಂತಿದೆ...

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಾಣಿಸಿಕೊಂಡಿದ್ದ ಶುಭ್ಮನ್ ಗಿಲ್ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರ ಬದಲಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಪಂದ್ಯದ ವೇಳೆಗೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಈ ಬಾರಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದ ಅಕ್ಷರ್ ಪಟೇಲ್ ಅವರನ್ನು ಸಹ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.