India Test Squad: ಟೀಮ್ ಇಂಡಿಯಾದಲ್ಲಿ ಮೂವರು ಆಲ್ರೌಂಡರ್ಗಳಿಗೆ ಮಣೆ
IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಕ್ಟೋಬರ್ 24 ರಿಂದ ಶುರುವಾಗಲಿರುವ ಎರಡನೇ ಪಂದ್ಯಕ್ಕೆ ಪುಣೆ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ನವೆಂಬರ್ 1 ರಿಂದ ಆರಂಭವಾಗಲಿರುವ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
Updated on: Oct 12, 2024 | 7:34 AM

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳು ತಂಡದಲ್ಲಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟರ್ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

ಬೌಲರ್ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
