India Test Squad: ಟೀಮ್ ಇಂಡಿಯಾದಲ್ಲಿ ಮೂವರು ಆಲ್​ರೌಂಡರ್​ಗಳಿಗೆ ಮಣೆ

|

Updated on: Oct 12, 2024 | 7:34 AM

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಕ್ಟೋಬರ್ 24 ರಿಂದ ಶುರುವಾಗಲಿರುವ ಎರಡನೇ ಪಂದ್ಯಕ್ಕೆ ಪುಣೆ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ನವೆಂಬರ್ 1 ರಿಂದ ಆರಂಭವಾಗಲಿರುವ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

1 / 6
ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

2 / 6
ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

3 / 6
ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

4 / 6
ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

5 / 6
ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

6 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.