
T20 World Cup 2026: ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಶುಭ್ಮನ್ ಗಿಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಉಪನಾಯಕನಾಗಿ ಕಾಣಿಸಿಕೊಂಡಿದ್ದ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈ ಬಿಡಲಾಗಿದೆ.

ಶುಭ್ಮನ್ ಗಿಲ್ ಕಳೆದ ಕೆಲ ಸರಣಿಗಳಿಂದ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಇದೇ ಕಾರಣದಿಂದ ಗಿಲ್ ಅವರನ್ನು ಟೀಮ್ ಇಂಡಿಯಾದಿಂದ ಕೈ ಬಿಡಲಾಗಿದೆ. ಬದಲಾಗಿ ಹೆಚ್ಚುವರಿ ಆರಂಭಿಕನಾಗಿ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ಜಿತೇಶ್ ಶರ್ಮಾ ಅವರನ್ನು ಸಹ ಟಿ20 ವಿಶ್ವಕಪ್ ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಫಿನಿಶರ್ ಆಗಿ ರಿಂಕು ಸಿಂಗ್ ಅವರನ್ನು ಭಾರತ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಅಂದರೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿದಿದ್ದ ಶುಭ್ಮನ್ ಗಿಲ್ ಹಾಗೂ ಜಿತೇಶ್ ಶರ್ಮಾಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಅವರ ಬದಲಿಗೆ ಈ ಬಾರಿ ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್ 15 ಸದಸ್ಯರುಗಳ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.