
ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ತಂಡವನ್ನು ಪ್ರಕಟಿಸಲಾಗುತ್ತದೆ. ಈ ತಂಡದಲ್ಲಿ ಇಬ್ಬರು ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ.

ಅಂದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದ ಕರುಣ್ ನಾಯರ್ ಅವರನ್ನು ವಿಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡುವ ಸಾಧ್ಯತೆಯಿದೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ರಿಷಭ್ ಪಂತ್ ಕೂಡ ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇತ್ತ ರಿಷಭ್ ಪಂತ್ ಅಲಭ್ಯತೆ ಕಾರಣ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಹೆಚ್ಚುವರಿ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಅವರಿಗೆ ಅವಕಾಶ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸಂಭಾವ್ಯ ಭಾರತ ತಂಡ ಹೀಗಿರಲಿದೆ...

ಸಂಭಾವ್ಯ ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಭಾರತ vs ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ಪ್ರಾರಂಭವಾಗಲಿದ್ದು, ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
Published On - 3:16 pm, Tue, 23 September 25