- Kannada News Photo gallery Cricket photos India squad for west indies tour india odi squad kannada news zp
India Squad: ಟೀಮ್ ಇಂಡಿಯಾದಲ್ಲಿ 10 ಬೌಲರ್ಗಳು..!
India Squad For West Indies tour: ಆಲ್ರೌಂಡರ್ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.
Updated on: Jun 24, 2023 | 9:25 PM

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ 17 ಸದಸ್ಯರಲ್ಲಿ, ಆಲ್ರೌಂಡರ್ ಒಳಗೊಂಡಂತೆ ಒಟ್ಟು 10 ಬೌಲರ್ಗಳು ಕಾಣಿಸಿಕೊಂಡಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟ್ಸ್ಮನ್ಗಳಾಗಿ ಆಯ್ಕೆಯಾಗಿರುವುದು ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

ಹಾಗೆಯೇ ಆಲ್ರೌಂಡರ್ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

ಇನ್ನು ಪರಿಪೂರ್ಣ ಬೌಲರ್ಗಳ ಪಟ್ಟಿಯಲ್ಲಿ ಒಟ್ಟು 6 ಮಂದಿಗೆ ಮಣೆ ಹಾಕಲಾಗಿದೆ. ಇಲ್ಲಿ ವೇಗಿಗಳಾಗಿ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್ಗಳಾಗಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ.

ಅಂದರೆ 17 ಸದಸ್ಯರ ಈ ಬಳಗದಲ್ಲಿ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಬಲ್ಲ 10 ಆಟಗಾರರಿರುವುದು ವಿಶೇಷ. ಅದರಂತೆ ಒಟ್ಟು 6 ವೇಗಿಗಳು ಹಾಗೂ ನಾಲ್ವರು ಸ್ಪಿನ್ನರ್ಗಳಿದ್ದಾರೆ.

ಇಲ್ಲಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸ್ಪಿನ್ನರ್ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ.

ಅಂದರೆ ಈ ಬಾರಿ ಆಯ್ಕೆ ಸಮಿತಿ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಲ್ರೌಂಡರ್ ಸೇರಿದಂತೆ ಹೆಚ್ಚಿನ ಬೌಲರ್ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅಲ್ಲದೆ ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್ಗಳನ್ನು ಏಷ್ಯಾಕಪ್ಗೆ ಆಯ್ಕೆ ಮಾಡಲಾಗುತ್ತದೆ.




