- Kannada News Photo gallery Cricket photos India Squad For WTC Final 2023: India Test Squad For WTC Final
India Squad: ಟೀಮ್ ಇಂಡಿಯಾದಲ್ಲಿ ನಾಲ್ವರು ಆಲ್ರೌಂಡರ್ಗಳು: ಐವರು ಬ್ಯಾಟ್ಸ್ಮನ್ಗಳು
India Squad For WTC Final 2023: WTC ಫೈನಲ್ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್.
Updated on: Apr 25, 2023 | 7:22 PM

India Test Squad: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಜೂನ್ 7 ರಂದು ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

ಈ ಫೈನಲ್ ಫೈಟ್ಗಾಗಿ ಬಿಸಿಸಿಐ ಒಟ್ಟು 15 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಇವರಲ್ಲಿ ಐವರು ಬ್ಯಾಟ್ಸ್ಮನ್ಗಳು, ಇಬ್ಬರು ವಿಕೆಟ್ ಕೀಪರ್ಗಳು, ನಾಲ್ವರು ಆಲ್ರೌಂಡರ್ಗಳು ಹಾಗೂ ನಾಲ್ವರು ಬೌಲರ್ಗಳು ಸ್ಥಾನ ಪಡೆದಿದ್ದಾರೆ.

ಇಲ್ಲಿ ಬ್ಯಾಟ್ಸ್ಮನ್ಗಳಾಗಿ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ.

ಹಾಗೆಯೇ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಆಲ್ರೌಂಡರ್ಗಳಾಗಿ ಸ್ಥಾನ ಪಡೆದಿದ್ದಾರೆ.

ಇನ್ನು ಬೌಲರ್ಗಳಾಗಿ ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ತಂಡದಲ್ಲಿದ್ದಾರೆ.

ವಿಕೆಟ್ ಕೀಪರ್ ಸ್ಥಾನದಲ್ಲಿ ಈ ಬಾರಿ ಕೆಎಲ್ ರಾಹುಲ್ ಹಾಗೂ ಕೆಎಸ್ ಭರತ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಕಳೆದ ಬಾರಿ ಕೀಪರ್ ಸ್ಥಾನದಲ್ಲಿ ತಂಡದಲ್ಲಿದ್ದ ಇಶಾನ್ ಕಿಶನ್ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

ಹಾಗೆಯೇ ಕಳೆದ ಟೆಸ್ಟ್ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ಹೊರಬಿದ್ದಿದ್ದು, ಅವರ ಬದಲಿಗೆ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ. ಇನ್ನು ನಿರೀಕ್ಷೆಯಂತೆ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಹೊರಗುಳಿದಿದ್ದಾರೆ.ಹಾಗೆಯೇ ಕಳೆದ ಟೆಸ್ಟ್ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ಹೊರಬಿದ್ದಿದ್ದು, ಅವರ ಬದಲಿಗೆ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ. ಇನ್ನು ನಿರೀಕ್ಷೆಯಂತೆ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಹೊರಗುಳಿದಿದ್ದಾರೆ.

WTC ಫೈನಲ್ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.
