AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದಲ್ಲಿ ಎಲ್ಲವೂ ಅದಲು ಬದಲು

Asia Cup 2025: ಏಷ್ಯಾಕಪ್ ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಟೀಮ್ ಇಂಡಿಯಾದ ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿಕೆಟ್ ಕೀಪರ್​ಗಳಾಗಿ ಆಯ್ಕೆಯಾಗಿರುವುದು ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ.

ಝಾಹಿರ್ ಯೂಸುಫ್
|

Updated on:Aug 20, 2025 | 9:16 AM

Share
ಏಷ್ಯಾಕಪ್ ಟಿ20 ಟೂರ್ನಿಗೆ ಭಾರತ ತಂಡದ ಘೋಷಣೆಯಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಶುಭ್​​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಏಷ್ಯಾಕಪ್ ಆಡಿತ್ತು. ಈ ವೇಳೆ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು.

1 / 6
ಆದರೀಗ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಇಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಅವರಿಗಿದ್ದ ಉಪನಾಯಕತ್ವ ಒಂದೇ ವರ್ಷದಲ್ಲಿ ಶುಭ್​ಮನ್ ಗಿಲ್ ಪಾಲಾಗಿದೆ.

2 / 6
2024 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇನ್ನು ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾರ್ಯ ನಿರ್ವಹಿಸಿದ್ದರು. ಇನ್ನು ಏಕದಿನ ಮತ್ತು ಟಿ20 ತಂಡಗಳನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಜವಾಬ್ದಾರಿ ನಿರ್ವಹಿಸಿದ್ದರು. 

3 / 6
ಇದೀಗ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವ ಶುಭ್​ಮನ್ ಗಿಲ್ ಪಾಲಾಗಿದೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಇದ್ದಾರೆ. ಇನ್ನು ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆದರೆ, ಉಪನಾಯಕತ್ವ ಶುಭ್​ಮನ್ ಗಿಲ್​ಗೆ ಒಲಿದಿದೆ. ಹಾಗೆಯೇ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾರ್ಯ ನಿರ್ವಹಿಸುತ್ತಿದ್ದರೆ, ವೈಸ್ ಕ್ಯಾಪ್ಟನ್ ಆಗಿ ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ.

4 / 6
ಅಂದರೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಅದರಲ್ಲೂ ಮೂರು ಸ್ವರೂಪಗಳಲ್ಲೂ ಶುಭ್​ಮನ್ ಗಿಲ್ ಕ್ಯಾಪ್ಟನ್ ಪಟ್ಟದೊಂದಿಗೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ ಬಳಿಕ ಭಾರತ ಟಿ20 ತಂಡದ ನಾಯಕತ್ವ ಕೂಡ ಗಿಲ್ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

5 / 6
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

6 / 6

Published On - 8:54 am, Wed, 20 August 25

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ

ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ

ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ

ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ

ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ

IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!