- Kannada News Photo gallery Cricket photos India T20 Squad for Australia 2025: Shubman Gill New ODI Captain
ಒಂದೇ ವರ್ಷದಲ್ಲಿ ಭಾರತ ತಂಡದಲ್ಲಿ ಎಲ್ಲವೂ ಅದಲು ಬದಲು
India Squad For Australia Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಗಳನ್ನು ಶುಭ್ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
Updated on:Oct 05, 2025 | 8:34 AM

ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಏಕದಿನ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಿತ್ತು. ಈ ವೇಳೆ ಉಪನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದರು.

ಆದರೀಗ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಇಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಶುಭ್ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಅವರಿಗಿದ್ದ ಉಪನಾಯಕತ್ವ ಒಂದೇ ವರ್ಷದಲ್ಲಿ ಶ್ರೇಯಸ್ ಅಯ್ಯರ್ ಪಾಲಾಗಿದೆ.

2024 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇನ್ನು ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ ಕಾರ್ಯ ನಿರ್ವಹಿಸಿದ್ದರು. ಇನ್ನು ಏಕದಿನ ಮತ್ತು ಟಿ20 ತಂಡಗಳನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಜವಾಬ್ದಾರಿ ನಿರ್ವಹಿಸಿದ್ದರು.

ಇದೀಗ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವ ಶುಭ್ಮನ್ ಗಿಲ್ ಪಾಲಾಗಿದೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಇದ್ದಾರೆ. ಇನ್ನು ಏಕದಿನ ತಂಡದ ನಾಯಕನಾಗಿ ಶುಭ್ಮನ್ ಗಿಲ್ ಆಯ್ಕೆಯಾದರೆ, ಉಪನಾಯಕತ್ವ ಶ್ರೇಯಸ್ ಅಯ್ಯರ್ಗೆ ಒಲಿದಿದೆ. ಹಾಗೆಯೇ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾರ್ಯ ನಿರ್ವಹಿಸುತ್ತಿದ್ದರೆ, ವೈಸ್ ಕ್ಯಾಪ್ಟನ್ ಆಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳುತ್ತಿದ್ದಾರೆ.

ಅಂದರೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಅದರಲ್ಲೂ ಎರಡು ಸ್ವರೂಪಗಳಲ್ಲೂ ಶುಭ್ಮನ್ ಗಿಲ್ ಕ್ಯಾಪ್ಟನ್ ಪಟ್ಟದೊಂದಿಗೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ಬಳಿಕ ಭಾರತ ಟಿ20 ತಂಡದ ನಾಯಕತ್ವ ಕೂಡ ಗಿಲ್ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
Published On - 8:32 am, Sun, 5 October 25




