Updated on:Jul 06, 2023 | 10:35 PM
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇನ್ನು ಹೊಸಮುಖಗಳಾಗಿ ತಿಲಕ್ ವರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ಆಲ್ರೌಂಡರ್ಗಳಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.
ಅಂದರೆ 15 ಸದಸ್ಯರ ಈ ಬಳಗದಲ್ಲಿ ಆಲ್ರೌಂಡರ್ ಆಗಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಮಾತ್ರ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪರಿಪೂರ್ಣ ಬ್ಯಾಟರ್ಗಳಾಗಿ ನಾಲ್ವರಿಗೆ ಅವಕಾಶ ಕಲ್ಪಿಸಲಾಗಿದೆ.
ಅದರಂತೆ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.
ಹಾಗೆಯೇ ಬೌಲರ್ಗಳ ಪಟ್ಟಿಯಲ್ಲಿ ಸ್ಪಿನ್ನರ್ಗಳಾಗಿ ಯುಜ್ವೇಂದ್ರ ಚಹಾಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ.
ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್ರೌಂಡರ್ಗಳಿಗೆ ಮಣೆಹಾಕಿಲ್ಲ ಎಂಬುದು ಸ್ಪಷ್ಟ. ಇಲ್ಲಿ ನಾಯಕ ಹಾರ್ದಿಕ್ ಪಾಂಡ್ಯರನ್ನು ಹೊರತುಪಡಿಸಿದರೆ, ಆಲ್ರೌಂಡರ್ ಕೋಟಾದಲ್ಲಿ ಸ್ಥಾನ ಪಡೆದಿರುವುದು ಅಕ್ಷರ್ ಪಟೇಲ್ ಮಾತ್ರ ಎಂಬುದೇ ಅಚ್ಚರಿ.
ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
Published On - 10:33 pm, Thu, 6 July 23