ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಸ್ಥಾನ ಪಡೆದಿಲ್ಲ. ಇವರ ಬದಲಿಗೆ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ಗಳಾಗಿ ಆಯ್ಕೆಯಾಗಿದ್ದಾರೆ.
1 / 5
ಹಾಗೆಯೇ ಹೊಸ ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ವೈಸ್ ಕ್ಯಾಪ್ಟನ್ ಆಗಿ ಸೂರ್ಯ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ.
2 / 5
ಈ ಹಿಂದೆ ಉಪನಾಯಕರಾಗಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಆಯ್ಕೆಯಾಗುತ್ತಿದ್ದರು. ಆದರೆ ಈ ಇಬ್ಬರು ಸತತ ವಿಫಲರಾಗಿರುವ ಹಿನ್ನೆಲೆಯಲ್ಲಿ ಇದೀಗ ತಂಡದಿಂದ ಹೊರಬಿದ್ದಿದ್ದಾರೆ. ಹಾಗಾಗಿ ಟಿ20 ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್ ಯಾದವ್ಗೆ ಹೊಸ ಜವಾಬ್ದಾರಿ ನೀಡಲಾಗಿದೆ.
3 / 5
ಇನ್ನು ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇದರೊಂದಿಗೆ ಭವಿಷ್ಯದಲ್ಲಿ ಟೀಮ್ ಇಂಡಿಯಾ ಟಿ20 ನಾಯಕರಾಗಿ ಪಾಂಡ್ಯ ಕಾಣಿಸಿಕೊಳ್ಳುವುದು ಕೂಡ ಖಚಿತವಾಗಿದೆ.