India T20 Squad: ತಂಡದಿಂದ ಹೊರಬಿದ್ದ ಪಂತ್: ಸೂರ್ಯ ಹೊಸ ಉಪನಾಯಕ

Edited By:

Updated on: Dec 27, 2022 | 11:01 PM

India T20 Squad: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್.

1 / 5
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಸ್ಥಾನ ಪಡೆದಿಲ್ಲ. ಇವರ ಬದಲಿಗೆ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ವಿಕೆಟ್​ ಕೀಪರ್​ಗಳಾಗಿ ಆಯ್ಕೆಯಾಗಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಸ್ಥಾನ ಪಡೆದಿಲ್ಲ. ಇವರ ಬದಲಿಗೆ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ವಿಕೆಟ್​ ಕೀಪರ್​ಗಳಾಗಿ ಆಯ್ಕೆಯಾಗಿದ್ದಾರೆ.

2 / 5

ಹಾಗೆಯೇ ಹೊಸ ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ವೈಸ್ ಕ್ಯಾಪ್ಟನ್ ಆಗಿ ಸೂರ್ಯ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ.

3 / 5

ಈ ಹಿಂದೆ ಉಪನಾಯಕರಾಗಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಆಯ್ಕೆಯಾಗುತ್ತಿದ್ದರು. ಆದರೆ ಈ ಇಬ್ಬರು ಸತತ ವಿಫಲರಾಗಿರುವ ಹಿನ್ನೆಲೆಯಲ್ಲಿ ಇದೀಗ ತಂಡದಿಂದ ಹೊರಬಿದ್ದಿದ್ದಾರೆ. ಹಾಗಾಗಿ ಟಿ20 ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಹೊಸ ಜವಾಬ್ದಾರಿ ನೀಡಲಾಗಿದೆ.

4 / 5

ಇನ್ನು ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇದರೊಂದಿಗೆ ಭವಿಷ್ಯದಲ್ಲಿ ಟೀಮ್ ಇಂಡಿಯಾ ಟಿ20 ನಾಯಕರಾಗಿ ಪಾಂಡ್ಯ ಕಾಣಿಸಿಕೊಳ್ಳುವುದು ಕೂಡ ಖಚಿತವಾಗಿದೆ.

5 / 5

ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

Published On - 11:00 pm, Tue, 27 December 22

Loading...
Unable to load recommendations.
Follow Us