AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಸಂಜು ಸ್ಯಾಮ್ಸನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದರು. ಆದರೆ, ಜಸ್ಪ್ರೀತ್ ಬುಮ್ರಾ ಅವರ ನಿರ್ಣಾಯಕ ಪ್ರದರ್ಶನವನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್, ಆ ಪ್ರಶಸ್ತಿಯನ್ನು ಬುಮ್ರಾಗೆ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಬುಮ್ರಾ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಕುರಿತು ಕ್ರಿಕೆಟ್ ವಲಯದಲ್ಲಿ ಚರ್ಚೆ ಆರಂಭವಾಗಿದೆ.

ಪೃಥ್ವಿಶಂಕರ
|

Updated on: Mar 12, 2026 | 7:36 PM

Share
2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಕೊನೆಯ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಅವರಿಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯೂ ಲಭಿಸಿತು. ಆದರೆ ಜಸ್ಪ್ರೀತ್ ಬುಮ್ರಾ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯ ಪಟ್ಟಿದ್ದಾರೆ.

1 / 5
ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಎಬಿ ಡಿವಿಲಿಯರ್ಸ್, ‘ಈ ಪ್ರಶಸ್ತಿಗಾಗಿ ಸಂಜು ಸ್ಯಾಮ್ಸನ್ ಮತ್ತು ಜಸ್ಪ್ರೀತ್ ಬುಮ್ರಾ ನಡುವೆ ತೀವ್ರ ಪೈಪೋಟಿ ಇತ್ತು. ಈ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಬುಮ್ರಾ, ಟೂರ್ನಮೆಂಟ್‌ ಆಟಗಾರ ಪ್ರಶಸ್ತಿ ರೇಸ್‌ನಲ್ಲಿದ್ದರು. ಆದರೆ ನನ್ನ ಅಭಿಪ್ರಾಯದಲ್ಲಿ, ಅವರು ನಿರ್ಣಾಯಕ ಮತ್ತು ಕಠಿಣ ಸಂದರ್ಭಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಪ್ರಶಸ್ತಿಗೆ ಬುಮ್ರಾ ಅರ್ಹರು ಎಂದಿದ್ದಾರೆ.

2 / 5
ಮುಂದುವರೆದು ಮಾತನಾಡಿರುವ ಅವರು, ‘ಭಾರತೀಯ ಪಿಚ್‌ಗಳಲ್ಲಿ ವೇಗವಾಗಿ ಬೌಲಿಂಗ್ ಮಾಡುವುದು ಸುಲಭವಲ್ಲ. ಆದಾಗ್ಯೂ ಟೂರ್ನಮೆಂಟ್‌ನಲ್ಲಿ ಕೆಲವು ಓವರ್‌ಗಳಲ್ಲಿ ಬುಮ್ರಾ ಕೊಂಚ ದುಬಾರಿಯಾಗಿದ್ದರು. ಆದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಬಂದಾಗ, ಅವರು ಅದ್ಭುತವಾಗಿ ಬೌಲಿಂಗ್ ಮಾಡಿದರು. ನಾನು ಬುಮ್ರಾರಂತಹ ಬೌಲರ್​ನ ಹಿಂದೆಂದೂ ನೋಡಿಲ್ಲ. ಬುಮ್ರಾ ಬೇರೆ ಗ್ರಹದಿಂದ ಬಂದ ಆಟಗಾರನಂತೆ ಕಾಣುತ್ತಾರೆ. ಅವರು ಭಾರತಕ್ಕೆ ಸಿಕ್ಕಿರುವ ಅಮೂಲ್ಯ ರತ್ನ ಎಂದು ಎಬಿಡಿ ಬಣ್ಣಿಸಿದ್ದಾರೆ.

3 / 5
ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಈ ಪಂದ್ಯಾವಳಿಯಲ್ಲಿ ಕೇವಲ 5 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ಸಂಜು 80.25 ಸರಾಸರಿಯಲ್ಲಿ 321 ರನ್ ಕಲೆಹಾಕಿದರು. ಇದರಲ್ಲಿ ಮೂರು ಅರ್ಧಶತಕಗಳು ಸೇರಿದ್ದವು. ಈ ಅರ್ಧಶತಕಗಳ ವಿಶೇಷತೆ ಏನೆಂದರೆ, ಈ ಮೂರೂ ಅರ್ಧಶತಕಗಳು ನಿರ್ಣಾಯಕ ‘ಮಾಡು-ಇಲ್ಲ-ಮಡಿ' ಪಂದ್ಯಗಳಲ್ಲಿ ಬಂದವು.

4 / 5
ಇತ್ತ ಜಸ್ಪ್ರೀತ್ ಬುಮ್ರಾ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಪಂದ್ಯಾವಳಿಯಲ್ಲಿ 8 ಪಂದ್ಯಗಳನ್ನಾಡಿದ ಬುಮ್ರಾ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರ ಎಕಾನಮಿ ರೇಟ್ ಕೂಡ ಪ್ರತಿ ಓವರ್‌ಗೆ ಕೇವಲ 6.21 ಆಗಿದೆ. ಫೈನಲ್ ಪಂದ್ಯದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ ಬುಮ್ರಾ 15 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

5 / 5
Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?

ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!

ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ

ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ