AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಈ ನಾಲ್ಕು ಕಾಕತಾಳೀಯಗಳು ಭಾರತವೇ ಚಾಂಪಿಯನ್ ಎನ್ನುತ್ತಿವೆ

India vs New Zealand Final: 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಅಹಮದಾಬಾದ್‌ನಲ್ಲಿ ಕಾದಾಡಲಿದೆ. ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ತವರಿನ ಟೀಂ ಇಂಡಿಯಾ ಕನಸಿಗೆ ಈ ನಾಲ್ಕು ಕಾಕತಾಳೀಯ ಘಟನೆಗಳು ಪೂರಕವಾಗಿ ನಿಂತಿವೆ. ಜಿಂಬಾಬ್ವೆ ಗೆಲುವು, ತವರಿನಲ್ಲಿ ವಿಶ್ವಕಪ್ ಗೆಲ್ಲುವ ಅವಕಾಶ, ದಕ್ಷಿಣ ಆಫ್ರಿಕಾ ವಿರುದ್ಧದ ಸೋಲು ಮತ್ತು ಇಂಗ್ಲೆಂಡ್ ಸೆಮಿಫೈನಲ್ ಗೆಲುವು ಭಾರತದ ಜಯಕ್ಕೆ ಸೂಚಿಸುತ್ತಿವೆ.

ಪೃಥ್ವಿಶಂಕರ
|

Updated on: Mar 07, 2026 | 6:03 PM

Share
 2026 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪ್ರಶಸ್ತಿ ಹಣಾಹಣಿ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ತವರಿನ ಲಾಭ ಪಡೆದು ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ ಈ ನಾಲ್ಕು ಕಾಕತಾಳೀಯ ಘಟನೆಗಳು ಪೂರಕವಾಗಿ ನಿಂತಿವೆ. ಹಾಗಿದ್ದರೆ ಯಾವು ಆ 4 ಕಾಕತಾಳೀಯಗಳು ಎಂಬುದನ್ನು ನೋಡುವುದಾದರೆ..

1 / 5
ಮೊದಲನೆಯದಾಗಿ  ಜಿಂಬಾಬ್ವೆ ತಂಡವು ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದಾಗಲೆಲ್ಲಾ, ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. 1983 ರ ಏಕದಿನ ವಿಶ್ವಕಪ್​ನಲ್ಲಿ ಜಿಂಬಾಬ್ವೆ ವಿರುದ್ಧ ಆಸೀಸ್ ಸೋತಿತ್ತು. ಆ ಆವೃತ್ತಿಯಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಿತ್ತು. ಆ ಬಳಿಕ 2007 ರ ಟಿ20 ವಿಶ್ವಕಪ್​ನಲ್ಲಿಯೂ ಆಸೀಸ್, ಜಿಂಬಾಬ್ವೆ ವಿರುದ್ಧ ಸೋತಿತ್ತು. ಆಗಲೂ ಧೋನಿ ನಾಯಕತ್ವದಲ್ಲಿ ಭಾರತ ವಿಶ್ವಕಪ್ ಎತ್ತಿಹಿಡಿದಿತ್ತು. ಈಗ 2026 ರ ಟಿ20 ವಿಶ್ವಕಪ್‌ನಲ್ಲಿ ಜಿಂಬಾಬ್ವೆ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಹೀಗಾಗಿ ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ನಿರೀಕ್ಷೆಯಿದೆ.

2 / 5
2011 ರ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಶ್ರೀಲಂಕಾವನ್ನು ಮಣಿಸಿದ ಟೀಂ ಇಂಡಿಯಾ, ವಿಶ್ವಕಪ್ ಎತ್ತಿಹಿಡಿದಿತ್ತು. ಈ ಮೂಲಕ ತವರಿನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿತ್ತು. ಇದುವರೆಗೆ ಯಾವುದೇ ತಂಡ ಕೂಡ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದಿಲ್ಲ. ಆದರೆ ಇದೀಗ ಟೀಂ ಇಂಡಿಯಾಗೆ ಆ ಅವಕಾಶವಿದೆ. 2011 ರ ಏಕದಿನ ವಿಶ್ವಕಪ್ ಇತಿಹಾಸವನ್ನು ಸೂರ್ಯ ಪಡೆ ಪುನರಾವರ್ತಿಸಿದರೆ, ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ದಾಖಲೆಯನ್ನೂ ತನ್ನ ಖಾತೆಗೆ ಹಾಕಿಕೊಳ್ಳಲಿದೆ.

3 / 5
ಮತ್ತೊಂದು ಕಾಕತಾಳೀಯವೆಂದರೆ 2011 ರ ಏಕದಿನ ವಿಶ್ವಕಪ್ ಗೆಲ್ಲುವುದಕ್ಕೂ ಮೊದಲು ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಸೋತಿತ್ತು. ಅದರಂತೆ 2026 ರ ಟಿ20 ವಿಶ್ವಕಪ್‌ನಲ್ಲೂ ಟೀಂ ಇಂಡಿಯಾದ ಏಕೈಕ ಸೋಲು ಅದೇ ದಕ್ಷಿಣ ಆಫ್ರಿಕಾ ವಿರುದ್ಧವಾಗಿದೆ. ಹೀಗಾಗಿ ಭಾರತ 2026 ರ ಟಿ20 ವಿಶ್ವಕಪ್ ಫೈನಲ್ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ.

4 / 5
ಟಿ20 ವಿಶ್ವಕಪ್ ಇತಿಹಾಸದಲ್ಲಿ, ಭಾರತ ಮತ್ತು ಇಂಗ್ಲೆಂಡ್ ನಡುವೆ ಸೆಮಿಫೈನಲ್ ನಡೆದಾಗಲೆಲ್ಲಾ, ಯಾವ ತಂಡ ಆ ಪಂದ್ಯವನ್ನು ಗೆದ್ದಿದೆಯೋ ಆ ತಂಡವೇ ಚಾಂಪಿಯನ್ ಆಗಿದೆ. 2022 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತವನ್ನು ಸೋಲಿಸಿದ್ದ ಇಂಗ್ಲೆಂಡ್ ಚಾಂಪಿಯನ್ ಆಗಿತ್ತು. ಹಾಗೆಯೇ 2024 ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದ ಭಾರತಕ್ಕೆ ಚಾಂಪಿಯನ್ ಪಟ್ಟ ಒಲಿದಿತ್ತು. ಈ ಪ್ರವೃತ್ತಿ ಮುಂದುವರಿದರೆ, ಭಾರತ 2026 ರ ಟಿ20 ವಿಶ್ವಕಪ್‌ನಲ್ಲಿಯೂ ಚಾಂಪಿಯನ್ ಆಗಬಹುದು. ಏಕೆಂದರೆ ಈ ಬಾರಿಯೂ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ ಸೋಲಿಸಿದೆ.

5 / 5
Follow Us
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ

ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್

ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್

ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ