ಭಾರತ ಟಿ20 ತಂಡದಿಂದ ಐವರು ಔಟ್!

Updated on: Oct 07, 2026 | 9:09 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಅಕ್ಟೋಬರ್ 22 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ, ಸುದೀರ್ಘ ನಾಲ್ಕು ವರ್ಷಗಳ ಬಳಿಕ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರು ಈ ಟಿ20 ತಂಡದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

1 / 7
ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರುಗಳ ಈ ಬಳಗದಲ್ಲಿ ಐವರು ಕಾಣಿಸಿಕೊಂಡಿಲ್ಲ. ಅಂದರೆ ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಐವರು ಆಟಗಾರನ್ನು  ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಆ ಆಟಗಾರರೆಂದರೆ...

ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರುಗಳ ಈ ಬಳಗದಲ್ಲಿ ಐವರು ಕಾಣಿಸಿಕೊಂಡಿಲ್ಲ. ಅಂದರೆ ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಐವರು ಆಟಗಾರನ್ನು  ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಆ ಆಟಗಾರರೆಂದರೆ...

2 / 7

ಯಶ್ ಠಾಕೂರ್: ಏಷ್ಯನ್ ಗೇಮ್ಸ್‌ ತಂಡದಲ್ಲಿ ವೇಗಿಯಾಗಿ ಕಾಣಿಸಿಕೊಂಡಿದ್ದ ಯಶ್ ಠಾಕೂರ್ ಅವರನ್ನು ನ್ಯೂಝಿಲೆಂಡ್​ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಪ್ರಿನ್ಸ್ ಯಾದವ್ ಅವರನ್ನು ಟೀಮ್ ಇಂಡಿಯಾಗೆ ಸೇರಿಸಿಕೊಳ್ಳಲಾಗಿದೆ. (PC: BCCI)

3 / 7

ಜಸ್​ಪ್ರೀತ್ ಬುಮ್ರಾ: ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಬೌಲಿಂಗ್ ಸಾರಥ್ಯ ವಹಿಸಿದ್ದ ವಿಶ್ವದ ನಂಬರ್ ಒನ್ ವೇಗಿ ಜಸ್​ಪ್ರೀತ್ ಬುಮ್ರಾ ಅವರಿಗೆ ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್​ ವಿರುದ್ಧದ ಈ ದ್ವಿಪಕ್ಷೀಯ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲೂ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ. (PC: BCCI)

4 / 7

ವಾಷಿಂಗ್ಟನ್ ಸುಂದರ್: ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಪಾಕಿಸ್ತಾನ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ಧ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೂ ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್​ ವಿರುದ್ಧದ ಟಿ20 ಸರಣಿ ವೇಳೆ ವಿಶ್ರಾಂತಿ ನೀಡಲಾಗಿದೆ. (PC: BCCI)

5 / 7

ವಿಪ್ರಾಜ್ ನಿಗಮ್: 2026ರ ಏಷ್ಯನ್ ಗೇಮ್ಸ್‌ನ ಆರಂಭಕ್ಕೂ ಮುನ್ನ ಗಾಯಗೊಂಡಿದ್ದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಬದಲಿ ಆಟಗಾರನಾಗಿ ಭಾರತ ತಂಡಕ್ಕೆ ಚೊಚ್ಚಲ ಅವಕಾಶ ಪಡೆದಿದ್ದ ಯುವ ಲೆಗ್ ಸ್ಪಿನ್ನರ್ ವಿಪ್ರಾಜ್ ನಿಗಮ್ ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಗಿದೆ. (PC: BCCI)

6 / 7

ರವಿ ಬಿಷ್ಣೋಯ್: ಏಷ್ಯನ್ ಗೇಮ್ಸ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಭಾರತ ಟಿ20 ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: BCCI)

7 / 7

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್. (PC: BCCI)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us