India Test Squad: ಭಾರತ ಟೆಸ್ಟ್ ತಂಡದಿಂದ ಮೂವರು ಔಟ್..!
TV9 Web | Updated By: ಝಾಹಿರ್ ಯೂಸುಫ್
Updated on:
Jan 13, 2024 | 9:23 AM
India Test Squad: ವಿಶೇಷ ಎಂದರೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರಿಂದ ಈ ಬಾರಿ ಮೂವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ಇಬ್ಬರು ಸ್ಪಿನ್ನರ್ ಹಾಗೂ ಓರ್ವ ವಿಕೆಟ್ ಕೀಪರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹಾಗಿದ್ರೆ ಭಾರತ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...
1 / 7
ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
2 / 7
ವಿಶೇಷ ಎಂದರೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರಿಂದ ಈ ಬಾರಿ ಮೂವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ಇಬ್ಬರು ಸ್ಪಿನ್ನರ್ ಹಾಗೂ ಓರ್ವ ವಿಕೆಟ್ ಕೀಪರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹಾಗಿದ್ರೆ ಭಾರತ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...
3 / 7
1- ಶಾರ್ದೂಲ್ ಠಾಕೂರ್: ಭಾರತದ ಪರ 11 ಟೆಸ್ಟ್ ಪಂದ್ಯಗಳನ್ನಾಡಿರುವ ಶಾರ್ದೂಲ್ ಠಾಕೂರ್ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಇದೀಗ ಶಾರ್ದೂಲ್ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.
4 / 7
2- ಪ್ರಸಿದ್ಧ್ ಕೃಷ್ಣ: ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಅದರಂತೆ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅವರು ಪರಿಣಾಮಕಾರಿ ಬೌಲಿಂಗ್ ಸಂಘಟಿಸುವಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರನ್ನು ಕೂಡ ಇದೀಗ ತಂಡದಿಂದ ಕೈ ಬಿಡಲಾಗಿದೆ.
5 / 7
3- ಅಭಿಮನ್ಯು ಈಶ್ವರನ್: ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ರುತುರಾಜ್ ಗಾಯಕ್ವಾಡ್ ಗಾಯದ ಕಾರಣ ಹೊರಗುಳಿದಿದ್ದರು. ಅವರ ಬದಲಿ ಆಟಗಾರನಾಗಿ ಅಭಿಮನ್ಯು ಈಶ್ವರನ್ಆಯ್ಕೆಯಾಗಿದ್ದರು. ಆದರೀಗ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಅಭಿಮನ್ಯುಗೆ ಅವಕಾಶ ನೀಡಲಾಗಿಲ್ಲ.
6 / 7
ಇನ್ನು ಈ ಮೂವರು ಆಟಗಾರರ ಬದಲಿಗೆ ಈ ಬಾರಿ ತಂಡದಲ್ಲಿ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್, ಸ್ಪಿನ್ನರ್ ಕುಲ್ದೀಪ್ ಯಾದವ್ ಹಾಗೂ ಯುವ ವಿಕೆಟ್ ಕೀಪರ್ ಧ್ರುವ್ ಜುರೇಲ್ಗೆ ಸ್ಥಾನ ನೀಡಲಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಿಗೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...
7 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.