AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟೆಸ್ಟ್ ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

India Test Squad For England Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ಲೀಡ್ಸ್​ನಲ್ಲಿ ನಡದರೆ, ಎರಡನೇ ಪಂದ್ಯವು ಬರ್ಮಿಂಗ್​ಹ್ಯಾಮ್​​ನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯಕ್ಕೆ ಲಾರ್ಡ್ಸ್​ ಮೈದಾನವು ಆತಿಥ್ಯವಹಿಸಲಿದೆ. ಹಾಗೆಯೇ 4ನೇ ಮತ್ತು 5ನೇ ಪಂದ್ಯಗಳು ಮ್ಯಾಂಚೆಸ್ಟರ್​ ಹಾಗೂ ಲಂಡನ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: May 24, 2025 | 2:55 PM

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಅವರೆಂದರೆ...

1 / 5
ಕೆಎಲ್ ರಾಹುಲ್: ಭಾರತ ಟೆಸ್ಟ್ ತಂಡದ ಆಧಾರಸ್ತಂಭವಾಗಿರುವ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಗೂ ಆಯ್ಕೆಯಾಗಿದ್ದಾರೆ. ಅತ್ತ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ರಾಹುಲ್ ಇಂಗ್ಲೆಂಡ್ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

2 / 5
ಪ್ರಸಿದ್ಧ್ ಕೃಷ್ಣ: ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತೊಮ್ಮೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇಂಗ್ಲೆಂಡ್ ಪಿಚ್​ ವೇಗಿಗಳಿಗೆ ಹೆಚ್ಚಿನ ಸಹಕಾರಿಯಾಗಿರುವ ಕಾರಣ ಪ್ರಸಿದ್ಧ್ ಆಡುವ ಬಳಗದಲ್ಲೂ ಕಾಣಿಸಿಕೊಳ್ಳಬಹುದು. ಏಕೆಂದರೆ 18 ಸದಸ್ಯರ ಬಳಗದಲ್ಲಿ ಪ್ರಮುಖ ವೇಗಿ ಮೊಹಮ್ಮದ್ ಶಮಿ ಸ್ಥಾನ ಪಡೆದಿಲ್ಲ. ಹೀಗಾಗಿ ಕನ್ನಡಿಗನಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

3 / 5
ಕರುಣ್ ನಾಯರ್: 2017 ರಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಟೆಸ್ಟ್ ಪಂದ್ಯವಾಡಿದ್ದ ಕರುಣ್ ನಾಯರ್ ಇದೀಗ 8 ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಕದ ತಟ್ಟಿದ್ದ ಕರುಣ್​ ಅವರನ್ನು ಇಂಗ್ಲೆಂಡ್ ಸರಣಿಗೆ ಆಯ್ಕೆ ಮಾಡಲಾಗಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

5 / 5
Follow us
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ

ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ

Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?

Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ