AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಇಬ್ಬರು ರಿಟರ್ನ್​, ಮೂವರು ಅಲಭ್ಯ!

IND vs SL Test: ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ಸಜ್ಜಾಗಿದ್ದು, ಜುಲೈ 28ರ ಮಂಗಳವಾರದಂದು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಈ ಸರಣಿಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳು ಕಂಡುಬರಲಿದೆ.

ಝಾಹಿರ್ ಯೂಸುಫ್
|

Updated on: Jul 27, 2026 | 2:20 PM

Share
ಶ್ರೀಲಂಕಾ ವಿರುದ್ಧದ ಮುಂಬರುವ ಮಹತ್ವದ ಟೆಸ್ಟ್ ಸರಣಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಸರಣಿಯಿಂದ ಮೂವರು ಆಟಗಾರರು ಹೊರಗುಳಿಯಲಿದ್ದು, ಮತ್ತಿಬ್ಬರು ಆಟಗಾರರು ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಆ ಆಟಗಾರರು ಯಾರೆಂದರೆ... (PC: Getty Images)

1 / 6
ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮಂಡಿಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಆಗಸ್ಟ್ 15 ರೊಳಗೆ ಅವರು ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ. ಹೀಗಾಗಿ ಬುಮ್ರಾ ಅವರನ್ನು ಶ್ರೀಲಂಕಾ ಸರಣಿಗೆ ಆಯ್ಕೆ ಮಾಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ. (PC: Getty Images)

2 / 6
ರವೀಂದ್ರ ಜಡೇಜಾ: ಗಾಯದ ಸಮಸ್ಯೆಯಿಂದಾಗಿ ಕಳೆದ ಮೇ ತಿಂಗಳಿನಿಂದ ಕ್ರಿಕೆಟ್ ಮೈದಾನದಿಂದ ದೂರವಿದ್ದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಸಂಪೂರ್ಣ ಫಿಟ್ ಆಗಿದ್ದು, ತಂಡಕ್ಕೆ ಮರಳುತ್ತಿರುವುದು ಖಚಿತವಾಗಿದೆ. ಶ್ರೀಲಂಕಾದ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಜಡೇಜಾ ಅವರ ಉಪಸ್ಥಿತಿ ಭಾರತಕ್ಕೆ ದೊಡ್ಡ ಬಲ ತುಂಬಲಿದೆ. (PC: Getty Images)

3 / 6
ಹರ್ಷಿತ್ ರಾಣಾ: ಇಂಗ್ಲೆಂಡ್ ಪ್ರವಾಸದ ವೇಳೆ ಗಂಭೀರವಾದ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಟೀಮ್ ಇಂಡಿಯಾ ವೇಗಿ ಹರ್ಷಿತ್ ರಾಣಾ, ಶ್ರೀಲಂಕಾ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೋರ್ವ ವೇಗಿಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. (PC: Getty Images)

4 / 6
ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡ ಹ್ಯಾಮ್​ಸ್ಟ್ರಿಂಗ್ ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಆಯ್ಕೆಗೆ ಲಭ್ಯರಿಲ್ಲ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಹೀಗಾಗಿ ನಿತೀಶ್ ರೆಡ್ಡಿ ಕೂಡ ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: Getty Images)

5 / 6
ವಾಷಿಂಗ್ಟನ್ ಸುಂದರ್: ಇಂಗ್ಲೆಂಡ್ ಪ್ರವಾಸದಲ್ಲಿ ಕಾಲಿನ ಗಾಯಕ್ಕೆ ಒಳಗಾಗಿದ್ದ ವಾಷಿಂಗ್ಟನ್ ಸುಂದರ್, ಆಗಸ್ಟ್ 15 ರಂದು ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಇದಾಗ್ಯೂ 2ನೇ ಟೆಸ್ಟ್ ಪಂದ್ಯಕ್ಕಾಗಿ ಆಯ್ಕೆಯಾಗಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ. (PC: Getty Images)

6 / 6
Follow Us