AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಪೂಜಾರ ಜಾಗಕ್ಕೆ ಇಬ್ಬರು ಆಟಗಾರರ ನಡುವೆ ಪೈಪೋಟಿ! ಯಾರಿಗೆ ಸಿಗಲಿದೆ ಅವಕಾಶ?

India Test Squad vs West Indies: ಇದೀಗ ಟೀಂ ಇಂಡಿಯಾದಲ್ಲಿ ಪೂಜಾರ ಸ್ಥಾನ ಖಾಲಿಯಾದ ಬಳಿಕ ಆ ಸ್ಥಾನಕ್ಕಾಗಿ ಇಬ್ಬರು ಯುವ ಆಟಗಾರ ನಡುವೆ ಪೈಪೋಟಿ ಆರಂಭವಾಗಿದೆ.

ಪೃಥ್ವಿಶಂಕರ
|

Updated on: Jun 24, 2023 | 7:59 AM

Share
ಕೆರಿಬಿಯನ್ ನಾಡಿನ ಪ್ರವಾಸಕ್ಕೆ ಭಾರತ ಟೆಸ್ಟ್ ತಂಡವನ್ನು ಹೆಸರಿಸಿದ ಬಿಸಿಸಿಐ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ. ಅದರಲ್ಲಿ ಪ್ರಮುಖವಾದದ್ದು, ಯುವ ಆಟಗಾರರಿಗೆ ಮಣೆ ಹಾಕಿರುವ ಆಯ್ಕೆ ಮಂಡಳಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವವರಿಗೆ ತಂಡದಿಂದ ಕೋಕ್ ನೀಡಿದೆ. ಅಂತಹವರಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಹಾಗೂ ವೇಗಿ ಉಮೇಶ್ ಯಾದವ್ ಕೂಡ ಸೇರಿದ್ದಾರೆ.

1 / 8
ಇದೀಗ ಟೀಂ ಇಂಡಿಯಾದಲ್ಲಿ ಪೂಜಾರ ಸ್ಥಾನ ಖಾಲಿಯಾದ ಬಳಿಕ ಆ ಸ್ಥಾನಕ್ಕಾಗಿ ಇಬ್ಬರು ಯುವ ಆಟಗಾರ  ನಡುವೆ ಪೈಪೋಟಿ ಆರಂಭವಾಗಿದೆ. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೋಚ್ ದ್ರಾವಿಡ್ ಈ ಇಬ್ಬರು ಆಟಗಾರರಲ್ಲಿ ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

2 / 8
ಸದ್ಯ ಪೂಜಾರ ಸ್ಥಾನಕ್ಕಾಗಿ ಕಾದು ಕುಳಿತಿರುವ ಆ ಇಬ್ಬರು ಆಟಗಾರರೆಂದರೆ, ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್. ವಾಸ್ತವವಾಗಿ ಈ ಇಬ್ಬರು ಆಟಗಾರರು ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ. ಐಪಿಎಲ್​ನಲ್ಲಿ ಜೈಸ್ವಾಲ್ ರಾಜಸ್ಥಾನ್ ಪರ ಆರಂಭಿಕರಾಗಿದ್ದರೆ, ಇತ್ತ ರುತುರಾಜ್ ಚೆನ್ನೈ ಪರ ಇನ್ನಿಂಗ್ಸ್ ಆರಂಭಿಸುತ್ತಾರೆ.

3 / 8
ಟೀಂ ಇಂಡಿಯಾದಲ್ಲಿ ಪೂಜಾರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ದರಿಂದ ಈ ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

4 / 8
ಇನ್ನು ಈ ಇಬ್ಬರ ಪ್ರಥಮ ದರ್ಜೆ ಪಂದ್ಯಗಳ ಅಂಕಿಅಂಶಗಳನ್ನು ನೋಡಿದರೆ ಜೈಸ್ವಾಲ್ ಇದುವರೆಗೆ 15 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 80.21ರ ಸರಾಸರಿಯಲ್ಲಿ ಒಟ್ಟು 2734 ರನ್ ಗಳಿಸಿದ್ದಾರೆ. ಇದರಲ್ಲಿ ಒಂಬತ್ತು ಶತಕ ಹಾಗೂ ಐದು ಅರ್ಧಶತಕಗಳು ಸೇರಿವೆ.

5 / 8
ಇನ್ನೊಂದೆಡೆ ಗಾಯಕ್ವಾಡ್ ಅವರ ಪ್ರಥಮ ದರ್ಜೆ ಪಂದ್ಯಗಳ ಅಂಕಿಅಂಶಗಳನ್ನು ಗಮನಿಸಿದರೆ, 28 ಪಂದ್ಯಗಳನ್ನು ಆಡಿರುವ ರುತುರಾಜ್ 42.19 ರ ಸರಾಸರಿಯಲ್ಲಿ 1941 ರನ್ ಗಳಿಸಿದ್ದಾರೆ. ಅವರ ಬ್ಯಾಟ್‌ನಿಂದ ಆರು ಶತಕಗಳು ಮತ್ತು ಒಂಬತ್ತು ಅರ್ಧ ಶತಕಗಳು ಹೊರಹೊಮ್ಮಿವೆ.

6 / 8
ಸದ್ಯ ಇವರಿಬ್ಬರೂ ಓಪನರ್ ಆಗಿರುವುದರಿಂದ ಟೀಂ ಇಂಡಿಯಾದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಾಧ್ಯವೇ ಎಂಬ ಪ್ರಶ್ನೆ ಮೂಡುವುದು ಸಹಜ. ಆದರೆ ಇಬ್ಬರೂ 3ನೇ ಕ್ರಮಾಂಕದಲ್ಲಿ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಜೈಸ್ವಾಲ್ 2022ರ ಐಪಿಎಲ್‌ನಲ್ಲಿ ಕೆಲವು ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದರು. ಅಲ್ಲದೆ ಕಳೆದ ಮಾರ್ಚ್‌ನಲ್ಲಿ ನಡೆದ ಇರಾನಿ ಕಪ್‌ನಲ್ಲಿ ರೆಸ್ಟ್ ಆಫ್ ಇಂಡಿಯಾ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಯಶಸ್ವಿ, ಮಧ್ಯಪ್ರದೇಶ ವಿರುದ್ಧ 213 ಮತ್ತು 144 ರನ್ ಸಿಡಿಸಿದ್ದರು.

7 / 8
ಮತ್ತೊಂದೆಡೆ ಗಾಯಕ್‌ವಾಡ್‌ಗೂ ಅವಕಾಶ ಸಿಕ್ಕರೆ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವ ತಂತ್ರಗಾರಿಕೆ ಅವರಲ್ಲಿದೆ. ಗಾಯಕ್ವಾಡ್ ಬ್ಯಾಟಿಂಗ್‌ನ ವಿಶೇಷತೆಯೆಂದರೆ, ವಿಕೆಟ್‌ನಲ್ಲಿ ಉಳಿಯುವುದು ಹೇಗೆ ಎಂದು ಅವರಿಗೆ ತಿಳಿದಿದೆ. ಪ್ರಮುಖವಾಗಿ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಬ್ಯಾಟರ್​​ಗೆ ಈ ತಂತ್ರಗಾರಿಕೆ ಬಹಳ ಅವಶ್ಯಕವಾಗಿರುತ್ತದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ