ಭಾರತ ಟೆಸ್ಟ್ ತಂಡಕ್ಕೆ ನೂತನ ನಾಯಕ ಆಯ್ಕೆ

Updated on: May 24, 2025 | 1:54 PM

India Test Team Captain: ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಕೆಲ ದಿನಗಳ ಹಿಂದೆಯಷ್ಟೇ ದೀರ್ಘಾವಧಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಬಿಸಿಸಿಐ ನೂತನ ನಾಯಕನನ್ನು ಆಯ್ಕೆ ಮಾಡಿದೆ. ಆದರಂತೆ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾವನ್ನು ಯುವ ಆಟಗಾರ ಮುನ್ನಡೆಸಲಿದ್ದಾರೆ.

1 / 6
ರೋಹಿತ್ ಶರ್ಮಾ (Rohit Sharma) ಬಳಿಕ ಭಾರತ ಟೆಸ್ಟ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಿಸಿಸಿಐ ಟೀಮ್ ಇಂಡಿಯಾದ ನೂತನ ನಾಯಕನನ್ನು ಹೆಸರಿಸಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಟೆಸ್ಟ್ ತಂಡವನ್ನು 25 ವರ್ಷದ ಯುವ ಆಟಗಾರ ಮುನ್ನಡೆಸಲಿದ್ದಾರೆ.

2 / 6
ಹೌದು, ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಈ ಹಿಂದೆ ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕತ್ವ ಜಸ್​ಪ್ರೀತ್ ಬುಮ್ರಾಗೆ ಸಿಗಲಿದೆ ಎನ್ನಲಾಗಿತ್ತು. ಆದರೆ ಭವಿಷ್ಯದ ದೃಷ್ಟಿಯಿಂದ ಆಯ್ಕೆ ಸಮಿತಿ ಯುವ ಆಟಗಾರನಿಗೆ ಕ್ಯಾಪ್ಟನ್ ಪಟ್ಟ ನೀಡಿದೆ.

3 / 6
ಇದಕ್ಕೂ ಮುನ್ನ ಶುಭ್​ಮನ್ ಗಿಲ್ ದುಲೀಪ್ ಟ್ರೋಫಿಯಲ್ಲಿ ಭಾರತ ಎ ತಂಡವನ್ನು ಮುನ್ನಡೆಸಿದ್ದರು. ಹಾಗೆಯೇ ರಣಜಿ ಟೂರ್ನಿಯಲ್ಲಿ ಪಂಜಾಬ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಇದೀಗ ಭಾರತ ಟೆಸ್ಟ್ ತಂಡದ ನಾಯಕತ್ವ ಕೂಡ ಒಲಿದಿದೆ.

4 / 6
ಇನ್ನು ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಭಾರತ ಟಿ20 ಹಾಗು ಏಕದಿನ ತಂಡಗಳನ್ನು ಮುನ್ನಡೆಸಿದ್ದ ಪಂತ್, ಇನ್ಮುಂದೆ ಭಾರತ ಟೆಸ್ಟ್ ತಂಡದ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೂಲಕ ಭಾರತದ ಪರ ನಾಯಕನಾಗಿ ಶುಭ್​ಮನ್ ಗಿಲ್ ಪಾದಾರ್ಪಣೆ ಮಾಡಲಿದ್ದಾರೆ.

6 / 6
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

Published On - 1:36 pm, Sat, 24 May 25