Updated on:Sep 26, 2022 | 4:32 PM
ಟೀಂ ಇಂಡಿಯಾ ವಿರುದ್ಧದ ದಕ್ಷಿಣ ಆಫ್ರಿಕಾ ತಂಡ ಭಾರತ ತಲುಪಿದೆ. ಆಸ್ಟ್ರೇಲಿಯಾವನ್ನು ಮಣಿಸಿದ ಟೀಂ ಇಂಡಿಯಾ ಕೂಡ ಈ ಸರಣಿಗೆ ಸಿದ್ಧವಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಮೊದಲು ಟಿ20 ಸರಣಿಯನ್ನು ಆಡಲಿದ್ದು, ಈ ಮೂಲಕ ಟಿ20 ವಿಶ್ವಕಪ್ಗಾಗಿ ಉಭಯ ತಂಡಗಳು ಸಜ್ಜಾಗಲಿದೆ.
ಈ ಸರಣಿಗಾಗಿ ಭಾರತದ ನೆಲಕ್ಕೆ ಕಾಲಿಟ್ಟ ದಕ್ಷಿಣ ಆಫ್ರಿಕಾ ತಂಡವನ್ನು ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು. ಈಗಾಗಲೇ ಆಫ್ರಿಕನ್ ತಂಡ ತಿರುವನಂತಪುರಂಗೆ ಆಗಮಿಸಿದ್ದು, ತೆಂಬಾ ಬಾವುಮಾ ತಂಡಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೊದಲು ಟಿ20 ಸರಣಿ ನಡೆಯಲಿದ್ದು, ಮೊದಲ ಪಂದ್ಯ ತಿರುವನಂತಪುರಂನಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿದೆ. ನಂತರ ಎರಡನೇ ಟಿ20 ಪಂದ್ಯ ಗುವಾಹಟಿಯಲ್ಲಿ ಅಕ್ಟೋಬರ್ 2 ರಂದು ನಡೆಯಲಿದೆ. ಮೂರನೇ ಮತ್ತು ಕೊನೆಯ ಟಿ20 ಪಂದ್ಯ ಅಕ್ಟೋಬರ್ 4 ರಂದು ಇಂದೋರ್‌ನಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿವೆ.
ಟಿ20 ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ODI ಅಕ್ಟೋಬರ್ 6 ರಂದು ಲಕ್ನೋದಲ್ಲಿ ನಡೆಯಲಿದೆ. ಎರಡನೇ ODI ಅಕ್ಟೋಬರ್ 11 ರಂದು ರಾಂಚಿಯಲ್ಲಿ ನಡೆಯಲಿದೆ ಮತ್ತು ಮೂರನೇ ಮತ್ತು ಅಂತಿಮ ODI ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ 2 ಗಂಟೆಗೆ ಪ್ರಾರಂಭವಾಗುತ್ತದೆ.
ದಕ್ಷಿಣ ಆಫ್ರಿಕಾ ಟಿ20 ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.
Published On - 4:30 pm, Mon, 26 September 22