IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು?

Updated on: Jun 12, 2026 | 9:08 PM

IND vs AFG probable playing XI: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ODI ಸರಣಿ ಶನಿವಾರ ಧರ್ಮಶಾಲಾದಲ್ಲಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಿಂದಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್ 11 ಬಗ್ಗೆ ಕುತೂಹಲ ಮೂಡಿಸಿದೆ. ಕೊಹ್ಲಿ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ ಅಥವಾ ಇಶಾನ್ ಕಿಶನ್ ನಡುವೆ ಸ್ಪರ್ಧೆ ಇದೆ. ಪಾಂಡ್ಯ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಆಡುವ ಸಾಧ್ಯತೆ ಇದೆ. ಎರಡೂ ತಂಡಗಳ ಸಂಭಾವ್ಯ ಹನ್ನೊಂದರ ವಿಶ್ಲೇಷಣೆ ಇಲ್ಲಿದೆ.

1 / 6
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಶನಿವಾರದಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಿಗೆ ಸಂಭಾವ್ಯ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಒಂದೆಡೆ ಅಫ್ಘಾನಿಸ್ತಾನದ ಚಿತ್ರಣ ಬಹುತೇಕ ಸ್ಪಷ್ಟವಾಗಿದೆಯಾದರೂ ಟೀಂ ಇಂಡಿಯಾದ ಪ್ಲೇಯಿಂಗ್ 11 ಬಗ್ಗೆ ಪ್ರಶ್ನೆಗಳು ಮೂಡಿವೆ.

2 / 6
ಏಕೆಂದರೆ ಈ ಸರಣಿಯಿಂದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಕೊಹ್ಲಿ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಆಡ್ತಾರಾ ಅಥವಾ ಇಶಾನ್ ಕಿಶಾನ್ ಆಡ್ತಾರಾ ಎಂದು ಕಾದು ನೋಡಬೇಕಾಗಿದೆ.

3 / 6
ಒಂದೆಡೆ ಯಶಸ್ವಿ ಜೈಸ್ವಾಲ್ ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಇತ್ತ ಇಶಾನ್ ಕಿಶಾನ್ ಟಿ20 ಕ್ರಿಕೆಟ್​ನಲ್ಲಿ 3 ನೇ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹಾಗೆಯೇ ಇಶಾನ್ ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿ ದ್ವಿಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ಹೀಗಾಗಿ ಇವರಿಬ್ಬರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಪಂದ್ಯದ ದಿನವೇ ತಿಳಿಯಲಿದೆ.

4 / 6
ವಿರಾಟ್ ಕೊಹ್ಲಿ ಜೊತೆಗೆ ಗಾಯದ ಕಾರಣದಿಂದ ಹಾರ್ದಿಕ್ ಪಾಂಡ್ಯ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿ ಆಟಗಾರನನ್ನು ಇನ್ನೂ ಘೋಷಿಸಲಾಗಿಲ್ಲ. ತಂಡದಲ್ಲಿ ಈಗಾಗಲೇ ನಿತೀಶ್ ಕುಮಾರ್ ರೆಡ್ಡಿ ಇದ್ದಾರೆ. ಹೀಗಾಗಿ ಪಾಂಡ್ಯ ಬದಲಿಗೆ ರೆಡ್ಡಿ ಆಡುವ ಸಾಧ್ಯತೆಗಳಿವೆ. ಉಳಿದಂತೆ ಪ್ರಿನ್ಸ್ ಯಾದವ್ ಅಥವಾ ಗುರ್ನೂರ್ ಬ್ರಾರ್ ಕೂಡ ಮೂರನೇ ವೇಗಿಯಾಗಿ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.

5 / 6
ಭಾರತದ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ಇಶಾನ್ ಕಿಶನ್/ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ.

6 / 6
ಅಫ್ಘಾನಿಸ್ತಾನದ ಸಂಭಾವ್ಯ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್ , ಅಲ್ಲಾ ಘಜನ್ಫರ್, ಸಲೀಮ್ ಸೈಫಿ, ಬಿಲಾಲ್ ಸಾಮಿ.

Published On - 8:55 pm, Fri, 12 June 26

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us