AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್

India vs Afghanistan ODI: shubman gill, ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿ ಜೂನ್ 12 ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ 3000 ಏಕದಿನ ರನ್ ಮೈಲಿಗಲ್ಲು ತಲುಪುವ ಅವಕಾಶದಲ್ಲಿದ್ದಾರೆ. ಗಿಲ್ ಧವನ್ ದಾಖಲೆಯನ್ನು ಮುರಿದು ಅತಿ ವೇಗದ ಭಾರತೀಯ ಆಟಗಾರನಾಗುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 12, 2026 | 5:32 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X).

1 / 5
ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ ಶುಭ್​ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ 3,000 ಏಕದಿನ ರನ್ ಪೂರೈಸುವ ಸನಿಹದಲ್ಲಿದ್ದಾರೆ (PC- BCCI X).

2 / 5
ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 47 ರನ್ ಮತ್ತು ಅಯ್ಯರ್ 23 ರನ್ ಗಳಿಸಿದರೆ, ಏಕದಿನ ಕ್ರಿಕೆಟ್​ನಲ್ಲಿ 3000 ರನ್​ಗಳ ಗಡಿ ದಾಟಲಿದ್ದಾರೆ. ಈ ಮೂಲಕ ಅತಿ ಕಡಿಮೆ ಪಂದ್ಯಗಳಲ್ಲಿ 3000 ಏಕದಿನ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಹಿಂದಿಕ್ಕಲಿದ್ದಾರೆ (PC- BCCI X).

3 / 5
ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ 3,000 ರನ್ ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಧವನ್ 72 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ಗಿಲ್ 61 ಇನ್ನಿಂಗ್ಸ್‌ಗಳಲ್ಲಿ 2,953 ರನ್ ಬಾರಿಸಿದ್ದರೆ, ಅಯ್ಯರ್ 70 ಇನ್ನಿಂಗ್ಸ್‌ಗಳಲ್ಲಿ 2,977 ರನ್ ಕಲೆಹಾಕಿದ್ದಾರೆ. ಇದೀಗ ಗಿಲ್, ಧವನ್ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ (PC- PTI).

4 / 5
ಇನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 3,000 ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಮೊದಲ ಸ್ಥಾನದಲ್ಲಿದ್ದಾರೆ. ಆಮ್ಲಾ 57 ಇನ್ನಿಂಗ್ಸ್‌ಗಳಲ್ಲಿ 30,000 ರನ್‌ಗಳನ್ನು ಪೂರೈಸಿದ್ದರು. ಅವರ ನಂತರ ಶೈ ಹೋಪ್, ಫಖರ್ ಜಮಾನ್ ಮತ್ತು ಇಮಾಮ್-ಉಲ್-ಹಕ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೂವರು ತಲಾ 67 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಗಿಲ್, ಈ ಮೂವರನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ (PC- Google).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ

ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!

ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ

ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ

ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ

ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ

ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!

ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ

ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ