
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X).

ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ 3,000 ಏಕದಿನ ರನ್ ಪೂರೈಸುವ ಸನಿಹದಲ್ಲಿದ್ದಾರೆ (PC- BCCI X).

ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 47 ರನ್ ಮತ್ತು ಅಯ್ಯರ್ 23 ರನ್ ಗಳಿಸಿದರೆ, ಏಕದಿನ ಕ್ರಿಕೆಟ್‌ನಲ್ಲಿ 3000 ರನ್ಗಳ ಗಡಿ ದಾಟಲಿದ್ದಾರೆ. ಈ ಮೂಲಕ ಅತಿ ಕಡಿಮೆ ಪಂದ್ಯಗಳಲ್ಲಿ 3000 ಏಕದಿನ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಹಿಂದಿಕ್ಕಲಿದ್ದಾರೆ (PC- BCCI X).

ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ 3,000 ರನ್ ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಧವನ್ 72 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ಗಿಲ್ 61 ಇನ್ನಿಂಗ್ಸ್‌ಗಳಲ್ಲಿ 2,953 ರನ್ ಬಾರಿಸಿದ್ದರೆ, ಅಯ್ಯರ್ 70 ಇನ್ನಿಂಗ್ಸ್‌ಗಳಲ್ಲಿ 2,977 ರನ್ ಕಲೆಹಾಕಿದ್ದಾರೆ. ಇದೀಗ ಗಿಲ್, ಧವನ್ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ (PC- PTI).

ಇನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 3,000 ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಮೊದಲ ಸ್ಥಾನದಲ್ಲಿದ್ದಾರೆ. ಆಮ್ಲಾ 57 ಇನ್ನಿಂಗ್ಸ್‌ಗಳಲ್ಲಿ 30,000 ರನ್‌ಗಳನ್ನು ಪೂರೈಸಿದ್ದರು. ಅವರ ನಂತರ ಶೈ ಹೋಪ್, ಫಖರ್ ಜಮಾನ್ ಮತ್ತು ಇಮಾಮ್-ಉಲ್-ಹಕ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೂವರು ತಲಾ 67 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಗಿಲ್, ಈ ಮೂವರನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ (PC- Google).