India Playing 11: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ: ಉಭಯ ತಂಡಗಳು ಹೀಗಿವೆ
India vs Afghanistan playing 11: ಟಿ20 ಕ್ರಿಕೆಟ್ನಲ್ಲಿ ಭಾರತ-ಅಫ್ಘಾನಿಸ್ತಾನ್ ತಂಡಗಳು 2 ಬಾರಿ ಮುಖಾಮುಖಿಯಾಗಿದೆ. ಈ ಎರಡೂ ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದಿರುವುದು ವಿಶೇಷ.
T20 ವಿಶ್ವಕಪ್‌ನ 33ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ್ ಮುಖಾಮುಖಿಯಾಗಿದೆ. ಅಬುದಾಭಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ನಾಯಕ ಮೊಹಮ್ಮದ್ ನಬಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
1 / 5
ಮೊದಲ ಎರಡು ಪಂದ್ಯಗಳನ್ನು ಸೋತಿರುವ ಭಾರತ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ನೆಟ್ ರನ್ ರೇಟ್ ಮೇಲೆ ಸೆಮಿಫೈನಲ್ ಆಸೆಯನ್ನು ಜೀವಂತವಿರಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅತ್ತ ಸೆಮಿಫೈನಲ್ ರೇಸ್ನಲ್ಲಿ ಉಳಿಯಲು ಅಫ್ಘಾನಿಸ್ತಾನ್ ತಂಡಕ್ಕೂ ಗೆಲುವು ಅನಿವಾರ್ಯ. ಹೀಗಾಗಿ ಉಭಯ ತಂಡಗಳಿಂದ ಕಠಿಣ ಪೈಪೋಟಿ ನಿರೀಕ್ಷಿಸಬಹುದು.
2 / 5
ಟಿ20 ಕ್ರಿಕೆಟ್ನಲ್ಲಿ ಭಾರತ-ಅಫ್ಘಾನಿಸ್ತಾನ್ ತಂಡಗಳು 2 ಬಾರಿ ಮುಖಾಮುಖಿಯಾಗಿದೆ. ಈ ಎರಡೂ ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದಿರುವುದು ವಿಶೇಷ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಅಫ್ಘಾನ್ ವಿರುದ್ದ ಭಾರತ ತಂಡವೇ ಬಲಿಷ್ಠ. ಇನ್ನು ಇಂದು ಕಣಕ್ಕಿಳಿದಿರುವ ಉಭಯ ತಂಡಗಳು ಹೀಗಿವೆ,