India Playing 11: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ: ಉಭಯ ತಂಡಗಳು ಹೀಗಿವೆ
TV9 Web | Updated By: ಝಾಹಿರ್ ಯೂಸುಫ್
Updated on:
Nov 03, 2021 | 7:14 PM
India vs Afghanistan playing 11: ಟಿ20 ಕ್ರಿಕೆಟ್ನಲ್ಲಿ ಭಾರತ-ಅಫ್ಘಾನಿಸ್ತಾನ್ ತಂಡಗಳು 2 ಬಾರಿ ಮುಖಾಮುಖಿಯಾಗಿದೆ. ಈ ಎರಡೂ ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದಿರುವುದು ವಿಶೇಷ.
1 / 5
T20 ವಿಶ್ವಕಪ್‌ನ 33ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ್ ಮುಖಾಮುಖಿಯಾಗಿದೆ. ಅಬುದಾಭಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ನಾಯಕ ಮೊಹಮ್ಮದ್ ನಬಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
2 / 5
ಮೊದಲ ಎರಡು ಪಂದ್ಯಗಳನ್ನು ಸೋತಿರುವ ಭಾರತ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ನೆಟ್ ರನ್ ರೇಟ್ ಮೇಲೆ ಸೆಮಿಫೈನಲ್ ಆಸೆಯನ್ನು ಜೀವಂತವಿರಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅತ್ತ ಸೆಮಿಫೈನಲ್ ರೇಸ್ನಲ್ಲಿ ಉಳಿಯಲು ಅಫ್ಘಾನಿಸ್ತಾನ್ ತಂಡಕ್ಕೂ ಗೆಲುವು ಅನಿವಾರ್ಯ. ಹೀಗಾಗಿ ಉಭಯ ತಂಡಗಳಿಂದ ಕಠಿಣ ಪೈಪೋಟಿ ನಿರೀಕ್ಷಿಸಬಹುದು.
3 / 5
ಟಿ20 ಕ್ರಿಕೆಟ್ನಲ್ಲಿ ಭಾರತ-ಅಫ್ಘಾನಿಸ್ತಾನ್ ತಂಡಗಳು 2 ಬಾರಿ ಮುಖಾಮುಖಿಯಾಗಿದೆ. ಈ ಎರಡೂ ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದಿರುವುದು ವಿಶೇಷ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಅಫ್ಘಾನ್ ವಿರುದ್ದ ಭಾರತ ತಂಡವೇ ಬಲಿಷ್ಠ. ಇನ್ನು ಇಂದು ಕಣಕ್ಕಿಳಿದಿರುವ ಉಭಯ ತಂಡಗಳು ಹೀಗಿವೆ,
4 / 5
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
5 / 5
ಅಫ್ಘಾನಿಸ್ತಾನ (ಪ್ಲೇಯಿಂಗ್ XI): ಹಜರತುಲ್ಲಾ ಝಜೈ, ಮೊಹಮ್ಮದ್ ಶಹಜಾದ್, ರಹಮಾನುಲ್ಲಾ ಗುರ್ಬಾಜ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ(ನಾಯಕ), ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ರಶೀದ್ ಖಾನ್, ಕರೀಂ ಜನತ್, ನವೀನ್-ಉಲ್-ಹಕ್, ಹಮೀದ್ ಹಸನ್
Published On - 7:11 pm, Wed, 3 November 21