ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ?: ಮೊಹಾಲಿ ಹವಾಮಾನ ಇಲ್ಲಿದೆ
Mohali Weather Report, IND vs AUS 1st ODI: ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ನಡೆಯಲಿರುವ ಮೊಹಾಲಿಯಲ್ಲಿ ಹಗಲಿನ ತಾಪಮಾನವು ಸುಮಾರು 32 ಡಿಗ್ರಿಗಳಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ. ಮತ್ತು ರಾತ್ರಿಯಲ್ಲಿ 24 ಡಿಗ್ರಿಗಳಿಗೆ ಇಳಿಯುತ್ತದೆ. ತಡರಾತ್ರಿ ಗುಡುಗು ಸಹಿತ ಮಳೆ ಬೀಳುತ್ತದೆ. ಆದರೆ ಸಂಜೆಯ ವೇಳೆಗೆ ಮಳೆಯ ಭೀತಿ ಇಲ್ಲ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವುದು ಅನುಮಾನ.
1 / 7
ಭಾರತ ಕ್ರಿಕೆಟ್ ತಂಡ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ.
2 / 7
ಮೊದಲ ಎರಡು ಏಕದಿನ ಪಂದ್ಯದಂದ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಮಧ್ಯಾಹ್ನ 1:00 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 1:30ಕ್ಕೆ ಪಂದ್ಯ ಶುರುವಾಗಲಿದೆ. ಹಾಗಾದರೆ, ಈ ಪಂದ್ಯಕ್ಕೆ ಮಳೆಯ ಕಾಟ ಇದೆಯೇ ಎಂಬುದನ್ನು ನೋಡೋಣ.
3 / 7
ಮೊಹಾಲಿಯಲ್ಲಿ ಹಗಲಿನ ತಾಪಮಾನವು ಸುಮಾರು 32 ಡಿಗ್ರಿಗಳಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ. ಮತ್ತು ರಾತ್ರಿಯಲ್ಲಿ 24 ಡಿಗ್ರಿಗಳಿಗೆ ಇಳಿಯುತ್ತದೆ. ತಡರಾತ್ರಿ ಗುಡುಗು ಸಹಿತ ಮಳೆ ಬೀಳುತ್ತದೆ. ಆದರೆ ಸಂಜೆಯ ವೇಳೆಗೆ ಮಳೆಯ ಭೀತಿ ಇಲ್ಲ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವುದು ಅನುಮಾನ.
4 / 7
ದೇಶದ ಇತರ ನಗರಗಳ ಮೈದಾನಗಳಿಗೆ ಹೋಲಿಸಿದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಪಿಚ್ ಹೆಚ್ಚು ಹಸಿರಿನಿಂದ ಕೂಡಿದೆ. ಹೀಗಾಗಿ ವೇಗದ ಬೌಲರ್‌ಗಳು ಈ ಪಿಚ್‌ನಿಂದ ಹೆಚ್ಚಿನ ನೆರವನ್ನು ನಿರೀಕ್ಷಿಸಬಹುದು. ಅಲ್ಲದೆ ಬೌನ್ಸ್ ಕೂಡ ವೇಗಿಗಳಿಗೆ ನೆರವಾಗುವ ಸಾಧ್ಯತೆಯಿದೆ.
5 / 7
ಮೊಹಾಲಿ ಸ್ಟೇಡಿಯಂನಲ್ಲಿ ನಡೆದ ಕೊನೆಯ ಐದು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದು ಒಂದು ಪಂದ್ಯ ಮಾತ್ರ. ಉಳಿದ ನಾಲ್ಕು ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಟಾಸ್ ಗೆದ್ದ ನಾಯಕನು ಮೊದಲು ಬೌಲ್ ಅನ್ನು ಆಯ್ಕೆ ಮಾಡುವುದು ಉತ್ತಮ ಆಯ್ಕೆ.
6 / 7
ಟೀಮ್ ಇಂಡಿಯಾ ಪರ ಓಪನರ್ ಆಗಿ ಯಾರು ಆಡಲಿದ್ದಾರೆ ಎಂಬ ಗೊಂದಲ ಎಲ್ಲರಲ್ಲಿದೆ. ಶುಭ್ಮನ್ ಗಿಲ್, ಇಶಾನ್ ಕಿಶನ್ ಜೊತೆ ರುತುರಾಜ್ ಗಾಯಕ್ವಾಡ್ ಇರುವುದರಿಂದ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಅಂತೆಯೆ ಶ್ರೇಯಸ್ ಅಯ್ಯರ್ ಫಿಟ್ ಆಗಿದ್ದಾರಾ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
7 / 7
ಇತ್ತ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹೀಗಿದ್ದರೂ ಕಾಂಗರೂ ಪಡೆ ಬಲಿಷ್ಠವಾಗಿದೆ. ವಾರ್ನರ್, ಮಾರ್ಶ್, ಸ್ಮಿತ್, ಲಾಬುಶೇನ್, ಗ್ರೀನ್, ಕ್ಯಾರಿ, ಸ್ಟೊಯಿನಿಸ್ ಹೀಗೆ ಬಲಿಷ್ಠ ಬ್ಯಾಟರ್ಗಳಿದ್ದಾರೆ.