AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿಲ್ಲ ರಿಷಭ್ ಪಂತ್: ಕೆಎಲ್ ರಾಹುಲ್ ಕೈಯಲ್ಲಿದೆ ಸೂರ್ಯನ ಭವಿಷ್ಯ

India vs Australia 1st Test: ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು.

TV9 Web
| Updated By: ಝಾಹಿರ್ ಯೂಸುಫ್|

Updated on: Feb 07, 2023 | 8:30 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್​ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಇದಕ್ಕೆ ಮುಖ್ಯ ಕಾರಣ ಪ್ರಮುಖ ಆಟಗಾರರ ಅಲಭ್ಯತೆ.

1 / 6
ಅಂದರೆ ಈ ಸರಣಿಗೆ ಅಜಿಂಕ್ಯ ರಹಾನೆ ಹಾಗೂ ಹುನಮ ವಿಹಾರಿ ಆಯ್ಕೆಯಾಗಿಲ್ಲ. ಮತ್ತೊಂದೆಡೆ ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಲ್ಲಿಲ್ಲ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

2 / 6
ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಒಂದು ವೇಳೆ ಗಿಲ್ ಓಪನಿಂಗ್ ಮಾಡಿದ್ರೆ ಕೆಎಲ್​ಆರ್​ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಇನ್ನು ಕೆಎಲ್ ರಾಹುಲ್ ಹೆಚ್ಚುವರಿ ಜವಾಬ್ದಾರಿವಹಿಸಿಕೊಂಡರೆ ಸೂರ್ಯಕುಮಾರ್ ಯಾದವ್​ಗೆ ಅವಕಾಶ ಸಿಗಲಿದೆ.

3 / 6
ಅಂದರೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಹಾಗೂ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ. ಆದರೆ ಈ ಇಬ್ಬರಿಗಿಂತ ವಿಕೆಟ್ ಕೀಪಿಂಗ್​ನಲ್ಲಿ ಕೆಎಲ್ ರಾಹುಲ್ ಹೆಚ್ಚಿನ ಅನುಭವ ಹೊಂದಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಜವಾಬ್ದಾರಿಯನ್ನೂ ಕೂಡ ಅವರೇ ವಹಿಸಿಕೊಂಡರೆ ಹೆಚ್ಚುವರಿ ಬ್ಯಾಟ್ಸ್​ಮನ್​ನ ಕಣಕ್ಕಿಳಿಸುವ ಆಯ್ಕೆ ಟೀಮ್ ಇಂಡಿಯಾಗೆ ಸಿಗಲಿದೆ.

4 / 6
ಅದರಂತೆ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ದೊರೆಯಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ರಿಷಭ್ ಪಂತ್ ಸ್ಥಾನವನ್ನು ತುಂಬಬಲ್ಲ ಆಟಗಾರನ ಅವಶ್ಯಕತೆ ಟೀಮ್ ಇಂಡಿಯಾಗಿದೆ. ಹೀಗಾಗಿ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್​ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

5 / 6
ಆದರೆ ಸೂರ್ಯಕುಮಾರ್​ಗೆ ಚಾನ್ಸ್ ಸಿಗಬೇಕಿದ್ದರೆ ಇಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ರೆ ಕೆಎಸ್ ಭರತ್​ ಆಡುವ ಬಳಗದಲ್ಲಿ ಅವಕಾಶ ಪಡೆಯಲಿದ್ದಾರೆ. ಅದರಂತೆ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ಗೆ ಚೊಚ್ಚಲ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ